ಉದಯವಾಹಿನಿ, ಬೆಂಗಳೂರು: ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮದುವೆ ಖಚಿತವಾಗಿದ್ದು, ಅವರು ಚೆನ್ನೈ ಮೂಲದ ಗಾಯಕಿ ಸಿವಶ್ರೀ ಅವರನ್ನು ವರಿಸಲಿದ್ದಾರೆ ಎಂದು ವರದಿಯಾಗಿದೆ.ಮುಂದಿನ ಮಾರ್ಚ್ ತಿಂಗಳಿನಲ್ಲಿ ಮದುವೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಸೂರ್ಯ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ತೇಜಸ್ವಿ ಸೂರ್ಯ ಮತ್ತು ಸಿವಶ್ರೀ ಸ್ಕಂದ ಪ್ರಸಾದ್ ಅವರ ಎರಡೂ ಕುಟುಂಬಗಳು ಈಗಾಗಲೇ ಮಾತುಕತೆ ನಡೆಸಿ ಮದುವೆಗೆ ಒಪ್ಪಿಗೆ ನೀಡಿದ್ದು, ಅದರಂತೆ ಬೆಂಗಳೂರಿನಲ್ಲಿ ಮದುವೆ ನಡೆಯಲಿದೆ ಎನ್ನಲಾಗಿದೆ.
ಸಿವಶ್ರೀ ಸ್ಥಂದ ಪ್ರಸಾದ್ ಅವರು ಶಾಸ್ತ್ರೀಯ ಸಂಗೀತ ಗಾಯಕಿ ಹಾಗೂ ಭರತನಾಟ್ಯ ಕಲಾವಿದೆಯಾಗಿದ್ದಾರೆ. ಶಾಸ್ತ್ರ ವಿಶ್ವವಿದ್ಯಾಲಯದಲ್ಲಿ ಬಯೋ ಎಂಜಿನಿಯರಿಂಗ್ ವಿಷಯದಲ್ಲಿ ಬಿಟೆಕ್ ಪದವಿ ಪಡೆದಿದ್ದಾರೆ.
ಇದರೊಂದಿಗೆ ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಎಂಎ ಪದವಿ, ಮದ್ರಾಸ್ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತ ಎಂಎ ಪದವಿ ಪಡೆದು ಕೊಂಡಿದ್ದಾರೆ.
ಇದರೊಂದಿಗೆ ಸೈಕ್ಲಿಂಗ್, ಟ್ರೆಕ್ಕಿಂಗ್ ವಾಕಥಾನ್‌ಗಳಲ್ಲಿಯೂ ಆಸಕ್ತಿ ಹೊಂದಿದ್ದಾರೆ. ಸಿವಶ್ರೀ ಅವರ ಯೂಟ್ಯೂಬ್ ಚಾನೆಲ್‌ಗೆ ಸುಮಾರು ಎರಡು ಲಕ್ಷಕ್ಕೂ ಅಧಿಕ ಫಾಲೋವರ್ಸ್ ಇದ್ದಾರೆ.
ಯೂಟ್ಯೂಬ್‌ನಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಫಾಲೋವರ್ಸ್‌ಗಳನ್ನು ಹೊಂದಿರುವ ಸಿವಶ್ರೀ ಸ್ಕಂದಕುಮಾರ್ ಕಳೆದ ಜನವರಿಯಲ್ಲಿ ರಾಮನವಮಿ ಸಂದರ್ಭದಲ್ಲಿ ಕನ್ನಡದ ಭಕ್ತಿಗೀತೆಯಾದ ಪೂಜಿಸಲೆಂದೇ ಹೂಗಳ ತಂದೆ ಹಾಡನ್ನು ತಮ್ಮ ಯೂಟ್ಯೂಬ್ ಚಾನಲ್‌ನಲ್ಲಿ ಹಾಡಿದ್ದರು. ಈ ಹಾಡಿಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಮೆಚ್ಚುಗೆ ವ್ಯಕ್ತಪಡಿಸಿ ತಮ್ಮ ಟ್ವಿಟ್ಟರ್‌ನಲ್ಲಿ ವೀಡಿಯೋ ಲಿಂಕ್ ಶೇರ್ ಮಾಡಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು.
