ಉದಯವಾಹಿನಿ, ವಿಜಯಪುರ: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಣ ಹೋಬಳಿಯ ೧೩ ಗ್ರಾಮಗಳ ರೈತರು ನಡೆಸುತ್ತಿರುವ ’ಭೂ ಸ್ವಾಧಿನ ವಿರೋಧಿ ಹೋರಾಟ’ ಒಂದು ಸಾವಿರ ತಲುಪಿದ್ದು, ಚನ್ನರಾಯಪಟ್ಟಣ ಧರಣಿ ಸ್ಥಳದಲ್ಲಿ ರೈತರ ಬೃಹತ್ ಸಮಾವೇಶ ನಡೆಯಿತು.
ನಾನು ರೈತ ಅಲ್ಲ.. ಆದರೆ, ಸ್ವಲ್ಪ ಗಿಡಮರ ಬೆಳೆಸಿದ್ದೇನೆ; ರೈತರು ನನಗಿಂತ ದೊಡ್ಡವರು. ಅವರ ಋಣ ನನ್ನ ಮೇಲೆ ಇರುವುದರಿಂದ ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಸಾವಿರ ದಿನಗಳ ಹೋರಾಟ ಸಣ್ಣದಲ್ಲ. ಈ ದೇಶದ ದೊಡ್ಡ ಕರ್ಮ ಮತ್ತು ಶಾಪವಂದರೆ, ಹಲವಾರು ವರ್ಷಗಳಿಂದ ರೈತರು ಹೋರಾಡುತ್ತಿದ್ದಾರೆ. ರೈತರು ಈ ದೇದ ಬೆನ್ನಲುಬು ಎಂದು ಮಾತಿಗಷ್ಟೇ ಹೇಳುತ್ತಾರೆ.
ಒಂದು ಸಾವಿರ ದಿನಗಳಿಂದ ಇಷ್ಟೆಲ್ಲಾ ಹೇಳಿದರೂ.. ಯಾವ ಅಹಂಕರ ಈವರೆಗೆ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಬಿಟ್ಟಿಲ್ಲ ಎಲ್ಲ ಸರ್ಕಾರಗಳು ಜನ ವಿರೋಧಿ ಹಾಗೂ ರೈತ ವಿರೋಧಿ ಆಗಿವೆ ಎಂದು ಬೇಸರ ವ್ಯಕ್ತಪಡಿಸಿದರು.
