ಉದಯವಾಹಿನಿ, ಬೆಂಗಳೂರು: ನಗರದ ಏಳು ಠಾಣೆಗಳ ಪೊಲೀಸರು ಕಾರ್ಯಾಚರಣೆ ನಡೆಸಿ 11 ಮಂದಿಯನ್ನು ಬಂಧಿಸಿ 13 ಲಕ್ಷಕ್ಕೂ ಹೆಚ್ಚು ಬೆಲೆಯ ಸುಮಾರು 33 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ಮಾದಕ ವಸ್ತು ಗಾಂಜಾವನ್ನು ಅಸ್ಸಾಂ, ಗೋವಾ, ತ್ರಿಪೂರ, ಓರಿಸ್ಸಾ, ಜಾರ್ಖಂಡ್, ಮಣಿಪುರ್ ಸೇರಿದಂತೆ ಇತರೆ ರಾಜ್ಯಗಳಿಂದ ನಗರಕ್ಕೆ ತರಿಸಿಕೊಂಡು ಮಾರಾಟ ಮಾಡುತ್ತಿದ್ದುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.
ಎಲೆಕ್ಟ್ರಾನಿಕ್ ಸಿಟಿ : ನಿಷೇದಿತ ಮಾದಕವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ಬಂಧಿಸಿ 1.10 ಲಕ್ಷ ರೂ. ಮೌಲ್ಯದ 2 ಕೆ.ಜಿ 595 ಗ್ರಾಂ ಗಾಂಜಾ, 800 ರೂ. ನಗದು ವಶಪಡಿಸಿಕೊಂಡಿದ್ದಾರೆ. ಇನ್‌್ಸಪೆಕ್ಟರ್ ನವೀನ್ ಮತ್ತು ಸಿಬ್ಬಂದಿ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದೆ.
ಯಲಹಂಕ ನ್ಯೂ ಟೌನ್: ನಿಷೇದಿತ ಮಾದಕವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಯಲಹಂಕ ನ್ಯೂ ಟೌನ್ ಠಾಣೆ ಪೊಲೀಸರು ಬಂಧಿಸಿ 6.25 ಲಕ್ಷರೂ. ಮೌಲ್ಯದ 15 ಕೆ.ಜಿ 630 ಗ್ರಾಂ ಗಾಂಜಾ, 3 ಮೊಬೈಲ್ ಫೋನ್, 1,200ರೂ. ನಗದು ಹಾಗೂ 1 ದ್ವಿ-ಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.
ಈ ಕಾರ್ಯಾಚರಣೆಯನ್ನು ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯ ಇನ್‌್ಸಪೆಕ್ಟರ್ ಹಾಗೂ ಸಿಬ್ಬಂದಿಯವರು ಯಶಸ್ವಿಗೊಳಿಸಿರುತ್ತಾರೆ. ರಾಜಗೋಪಾಲ್ನಗರ: ನಿಷೇದಿತ ಮಾದಕವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಒಬ್ಬನನ್ನು ರಾಜಗೋಪಾಲ್ನಗರ ಠಾಣೆ ಪೊಲೀಸರು ಬಂಧಿಸಿ 1.10 ಲಕ್ಷ ರೂ. ಮೌಲ್ಯದ 5 ಕೆ.ಜಿ 450 ಗ್ರಾಂ ಗಾಂಜಾ ಹಾಗೂ 500 ರೂ. ನಗದು ವಶಪಡಿಸಿಕೊಳ್ಳುವಲ್ಲಿ ಇನ್‌್ಸಪೆಕ್ಟರ್ ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!