ಉದಯವಾಹಿನಿ, ಬೆಂಗಳೂರು : ‘ಹಳೆ ಪಿಂಚಣಿ ಯೋಜನೆ’ ಜಾರಿಗೊಳಿಸುವಂತೆ ಡಿಸಿಎಂ ಡಿಕೆ ಶಿವಕುಮಾರ್ ಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಸಲ್ಲಿಸಿತು.ಪ್ರಣಾಳಿಕೆಯಲ್ಲಿನ ಭರವಸೆಯಂತೆ ಎನ್.ಪಿ.ಎಸ್ (NPS) ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಹಾಗೂ 7ನೇ ವೇತನ ಆಯೋಗದ ವರದಿಯನ್ನು ಪಡೆದು ಶೀಘ್ರ ಅನುಷ್ಠಾನಗೊಳಿಸುವಂತೆ ಮನವಿ ಮಾಡಲಾಯಿತು.ಅಂತೆಯೇ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರನ್ನು ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿರವರ ನೇತೃತ್ವದಲ್ಲಿ ಅಭಿನಂದಿಸಲಾಯಿತು.
