ಉದಯವಾಹಿನಿ, ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು) : ತೆಲಂಗಾಣ ರಾಜ್ಯದ ಯಾದಾದ್ರಿ ಭುವನಗಿರಿ ಜಿಲ್ಲೆ ಅಲೇರುಮಂಡಲ ಕೊಲನುಪಾಕ ಶ್ರೀ ಚಂಡಿಕಾಂಬಾ ಸಮೇತ ಸ್ವಯಂಭೂ ಶ್ರೀ ಸೋಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಜನೆವರಿ 7ರಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರ 69ನೇ ಜನ್ಮ ದಿನೋತ್ಸವ ಹಾಗೂ ವೀರಶೈವ ಸಂಸ್ಕøತಿ ಸಂವರ್ಧನಾ ಸಮಾರಂಭ ನಡೆಯುವುದು.
ದಿನಾಂಕ 3ರಿಂದ 7ರ ವರೆಗೆ ಪ್ರತಿ ದಿನ ಪ್ರಾತ:ಕಾಲ ಶ್ರೀ ಜಗದ್ಗುರು ರೇಣುಕಾಚಾರ್ಯರು ಅವತರಿಸಿದ ಶ್ರೀ ಸ್ವಯಂಭು ಸೋಮೇಶ್ವರ ಮಹಾಲಿಂಗಕ್ಕೆ ಮಹಾರುದ್ರಾಭಿಷೇಕ, ವಿಶೇಷ ಪೂಜೆ, ಸಹಸ್ರ ಪುಷ್ಪಾರ್ಚನೆ ಹಾಗೂ ಶ್ರೀ ಚಂಡಿಕಾಂಬಾ ದೇವಿಗೆ ಕುಂಕುಮಾರ್ಚನೆ ಹಾಗೂ ಶ್ರೀ ರಂಭಾಪುರಿ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜಾ ಜರುಗುವುದು. ಐದೂ ದಿನಗಳ ಸಮಾರಂಭಗಳಲ್ಲಿ ಕರ್ನಾಟಕ ಮತ್ತು ತೆಲಂಗಾಣದ ಸಚಿವರು ಗಣ್ಯರು, ವಿವಿಧ ಮಠಾಧೀಶರು ಹಾಗೂ ಶ್ರೀ ಕೊಲ್ಲಿಪಾಕಿ ಸೋಮೇಶ್ವರ ಜಗದ್ಗುರು ರೇಣುಕಾಚಾರ್ಯ ಡೆವೆಲಪಮೆಂಟ್ & ಚಾರಿಟೇಬಲ್ ಟ್ರಸ್ಟ್(ರಿ)ನ ಪದಾಧಿಕಾರಿಗಳು ಸದಸ್ಯರು ಪಾಲ್ಗೊಳ್ಳುವರು.

Leave a Reply

Your email address will not be published. Required fields are marked *

error: Content is protected !!