ಉದಯವಾಹಿನಿ, ಚಿಕ್ಕಮಗಳೂರು: ಹೊಸ ವರ್ಷದ ಸಂಭ್ರಮದ ನಡುವೆ ಜಿಲ್ಲೆಯ ಪ್ರವಾಸಿ ತಾಣಗಳ ವೀಕ್ಷಣೆಗೆ ಪ್ರವಾಸಿಗರ ದಂಡೆ ನೆರೆದಿತ್ತು. ಎಲ್ಲೆಡೆ ಪ್ರವಾಸಿ ತಾಣಗಳು ಬುಧವಾರ ಭರ್ತಿಯಾಗಿದ್ದವು. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಬಾಬಾಬುಡನ್‌ಗಿರಿ, ಮಾಣಿಕ್ಯಧಾರ, ಕೆಮ್ಮಣ್ಣುಗುಂಡಿ, ಹಿರೆಕೊಳಲೆ ಕೆರೆ, ಎತ್ತಿನಭುಜ, ದೇವರಮನೆ, ರಾಣಿಝರಿ, ಬಲ್ಲಾಳರಾಯನ ದುರ್ಗ, ಬಂಡಾಜೆ ಜಲಪಾತ, ಕೂಡಿಗೆ ಜಲಪಾತ, ಕ್ಯಾತನಮಕ್ಕಿ. ಕೆಮ್ಮಣ್ಣುಗುಂಡಿ, ಕಲ್ಪತ್ರಗಿರಿ, ಹೆಬ್ಬೆ ಜಲಪಾತ, ಅಯ್ಯನಕೆರೆ ಸೇರಿ ಎಲ್ಲಾ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕಿದವು. ವರ್ಷಾಂತ್ಯ ಮತ್ತು ಹೊಸ ವರ್ಷದ ಸಂಭ್ರಮಾಚರಣೆಗೆ ಜಿಲ್ಲೆಯ ಎಲ್ಲಾ ಹೋಮ್ ಸ್ಟೇಗಳು, ರೆಸಾರ್ಟ್ಗಳು ಮತ್ತು ಹೋಟೆಲ್‌ಗಳು ಭರ್ತಿಯಾಗಿದ್ದವು. ರಾತ್ರಿ ಸಂಭ್ರಮ ಮುಗಿಸಿ ಬೆಳಿಗ್ಗೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದರು. ವಾರಾಂತ್ಯ ಅಲ್ಲದಿದ್ದರೂ ಹೊಸ ವರ್ಷದ ಸಂಭ್ರಮ ಆಚರಣೆಗೆ ಜಿಲ್ಲೆಯ ಎಲ್ಲಾ ಹೋಂಸ್ಟೇಗಳು ಭರ್ತಿಯಾಗಿದ್ದವು. ಹೊರ ರಾಜ್ಯಗಳು ಮತ್ತು ನಾಡಿನ ವಿವಿಧೆಡೆಗಳಿಂದ ಜನ ದಾಂಗುಡಿ ಇಟ್ಟಿದ್ದರು.
