ಉದಯವಾಹಿನಿ, ಬೀಜಿಂಗ್: ಕೋವಿಡ್ ವೈರಾಣು ಜಗತ್ತನ್ನು ಕಾಡಿದ 5 ವರ್ಷಗಳ ನಂತರ ಈಗ ಚೀನಾದಲ್ಲಿ ಮತ್ತೊಂದು ನಿಗೂಢ ವೈರಾಣು ಎದುರಾಗಿದ್ದು ಆತಂಕ ಹೆಚ್ಚಿಸಿದೆ. ಹೂಮನ್ ಮೆಟಾಪ್ರೊಮೊವೈರಸ್ ಈ ಬಾರಿ ಚೀನಾದಲ್ಲಿ ಕಾಣಿಸಿಕೊಂಡಿರುವ ಹೊಸ ವೈರಾಣು ಆಗಿದ್ದು, ನೆರೆಯ ರಾಷ್ಟ್ರ ಮತ್ತೊಮ್ಮೆ ಹೊಸ ವೈರಾಣುವಿನಿಂದ ಪಾರಾಗಲು ಸ್ಕಿನಿಂಗ್, ಪತ್ತೆ ಮತ್ತು ಪ್ರತ್ಯೇಕತೆಯ ಪ್ರೋಟೋಕಾಲ್‌ಗಳ ಮೊರೆ ಹೋಗಿದೆ. ಚೀನಾದಲ್ಲಿ HMPVಯ ವೈರಾಣು ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು ವಿಶೇಷವಾಗಿ ಉತ್ತರ ಪ್ರಾಂತ್ಯಗಳಲ್ಲಿ 14 ವರ್ಷದೊಳಗಿನವರನ್ನು ಈ ವೈರಾಣು ಹೆಚ್ಚು ಬಾಧಿಸುತ್ತಿದೆ ಎಂದು ಅಧಿಕಾರಿಗಳು ಹೇಳಿರುವುದನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. COVID ಮಾದರಿಯ ಸ್ಥಿತಿ ಎದುರಾಗದಂತೆ ತಡೆಗಟ್ಟಲು ಚೀನಾ ಸರ್ಕಾರ ಅಜ್ಞಾತ ವೈರಸ್ ನ್ನು ನಿಭಾಯಿಸಲು ಮೇಲ್ವಿಚಾರಣಾ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ನಡೆಸುತ್ತಿದೆ.
