ಉದಯವಾಹಿನಿ, ಬೆಂಗಳೂರು: ಖ್ಯಾತ ರಾಜಕೀಯ ತಜ್ಞ, ಲೇಖಕ -ಚಿಂತಕ ಪ್ರೊ.ಮುಜಾಫರ್ ಅಸ್ಸಾದಿ ನಿಧನರಾಗಿದ್ದಾರೆ. ೬೩ ವರ್ಷದ ಪ್ರೊ.ಮುಜಾಫರ್ ಅಸ್ಸಾದಿ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅಸ್ಸಾದಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೂಚಿಸಿ .ಪ್ರೊ.ಅಸ್ಸಾದಿ ಕೇವಲ ಒಬ್ಬ ಪ್ರಾಧ್ಯಾಪಕ ಆಗಿರಲಿಲ್ಲ. ನಾಡಿನ ಜನಪರ ಹೋರಾಟವನ್ನು ವೈಚಾರಿಕ ಚಿಂತನೆಯ ಮಾರ್ಗದರ್ಶನದೊಂದಿಗೆ ಮುನ್ನಡೆಸಿದ್ದಾರೆ. ಅವರ ಅಗಲಿಕೆಯಿಂದ ನಾಡು ಬಡವಾಗಿದೆ ಎಂದಿದ್ದಾರೆ.
ಮುಜಾಫರ್ ಅಸ್ಸಾದಿ ೨೦೨೨ ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಇದಕ್ಕೂ ಮುನ್ನ ಅವರು ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಮತ್ತು ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ.
ಉಡುಪಿ ಜಿಲ್ಲೆಯ ಶಿರ್ವ ಗ್ರಾಮದವರಾದ ಅಸ್ಸಾದಿ, ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ, ದೆಹಲಿಯ ಜೆಎನ್‌ಯು ವಿಶ್ವವಿದ್ಯಾನಿಲಯದಲ್ಲಿ ಎಂ.ಫಿಲ್ ಮತ್ತು ಪಿಎಚ್‌ಡಿ ಮುಗಿಸಿದ್ದಾರೆ. ಅವರು ಚಿಕಾಗೋ ವಿಶ್ವವಿದ್ಯಾನಿಲಯದಿಂದ ತಮ್ಮ ಪೋಸ್ಟ್-ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ.
ಅಸ್ಸಾದಿ ಅವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ರಾಜಕೀಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ ಮತ್ತು ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು. ಅವರು ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿಯಾಗಿ ಸೇವೆ ಸಲ್ಲಿಸಿದರು ಮತ್ತು ೨೦೨೨ ರಲ್ಲಿ ನಿವೃತ್ತರಾದರು. ಮೈಸೂರಿನ ಸರಸ್ವತಿಪುರಂನಲ್ಲಿರುವ ಮುಸ್ಲಿಂ ಹಾಸ್ಟೆಲ್‌ನಲ್ಲಿ ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!