ಉದಯವಾಹಿನಿ, ಬೆಂಗಳೂರು: ನೂತನವಾಗಿ ಚುನಾಯಿತರಾದ ಬಿಜೆಪಿ ಶಾಸಕರ 66 ಶಾಸಕರ ಮತ್ತು ಪರಾಜಿತ ಅಭ್ಯರ್ಥಿಗಳ ಸಭೆಯು ನಾಳೆ (8.6.2023) ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದ್ದಾರೆ.
ನೂತನ ಶಾಸಕರ ಸಭೆಯು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ ಮಧ್ಯಾಹ್ನದ ನಂತರ 3.00 ಗಂಟೆಗೆ ಎಲ್ಲಾ ಪರಾಜಿತ ಅಭ್ಯರ್ಥಿಗಳ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಎಲ್ಲಾ ಪರಾಜಿತ ಅಭ್ಯರ್ಥಿಗಳು ಭಾಗವಹಿಸುವಂತೆ ಅವರು ವಿನಂತಿಸಿದ್ದಾರೆ.ಸಂಜೆ ರಾಜ್ಯ ಕೋರ್ ಕಮಿಟಿ ಸಭೆ ಸಂಜೆ 6.00 ಗಂಟೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ ಎಂದು ಅವರು ತಿಳಿಸಿದ್ದು, ನಾಳೆ ನಡೆಯುವ ಎಲ್ಲಾ ಸಭೆಗಳಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ರಾಜ್ಯದ ಪ್ರಭಾರಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಮಾಜಿ ಸಚಿವ ಆರ್. ಅಶೋಕ್ ಅವರು ಭಾಗವಹಿಸಿ ಸಭೆಯಲ್ಲಿ ಮಾರ್ಗದರ್ಶನ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!