ಉದಯವಾಹಿನಿ, ಬೆಂಗಳೂರು: ಡೆಡ್ಲಿ ಕೊರೊನಾ ವೈರಸ್ ನಂತರ ಚೀನಾದಲ್ಲಿ ಕಾಣಿಸಿಕೊಂಡಿರುವ ಹೆಚ್ಎಂಪಿವಿ ವೈರಸ್ ಕಾಟ ಭಾರತಕ್ಕೂ ಕಾಲಿಟ್ಟಿದೆ. ಅದರಲ್ಲೂ ಬೆಂಗಳೂರಿನಲ್ಲಿ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.ಹ್ಯೂಮನ್ ಮೆಟಾನ್ಯೂಮೋ ವೈರಸ್ (ಎಚ್ಎಂಪಿವಿ) ಸೋಂಕು ಒಂದು ವರ್ಷದೊಳಗಿನ ಎರಡು ಮಕ್ಕಳಲ್ಲಿ ಕಾಣಿಸಿಕೊಂಡಿದೆ.
ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ ಮೂರು ತಿಂಗಳ ಮಗು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆದ ನಂತರ ಆ ಮಗುವಿನಲ್ಲಿ ಹೆಚ್ಎಂಪಿವಿ ಸೋಂಕು ಇರುವುದು ಗೊತ್ತಾಗಿದೆ. ಆದೇ ರೀತಿ ನಗರದ ಮತ್ತೊಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಂಟು ತಿಂಗಳ ಮಗುವಿನಲ್ಲೂ ಎಚ್ಎಂಪಿವಿ ಪತ್ತೆಯಾಗಿದೆ.
ತೀವ್ರ ಜ್ವರದಿಂದ ಬಳಲುತ್ತಿದ್ದ ಎಂಟು ತಿಂಗಳ ಮಗುವನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ್ವರ ಕಡಿಮೆಯಾದ ಹಿನ್ನೆಲೆಯಲ್ಲಿ ಮಗುವಿನ ರಕ್ತ ಪರೀಕ್ಷೆ ನಡೆಸಿದಾಗ ಎಚ್ಎಂಪಿವಿ ಸೋಂಕು ತಗುಲಿರುವುದು ದೃಢಪಟ್ಟಿದೆ.ಮಗುವಿಗೆ ಜ್ವರ ಬಂದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಈ ವೇಳೆ ರಕ್ತ ಪರೀಕ್ಷೆ ಮಾಡಿಸಿದಾಗ ಹೆಚ್ಎಂವಿಪಿ ವೈರಸ್ ಇರುವುದು ದಢಪಟ್ಟಿದೆ. ಚೀನಾದಲ್ಲಿ ಮರಣ ಮೃದಂಗ ಭಾರಿಸಿ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದ್ದ ಕೊರೊನಾ ವೈರಸ್ ದೇಶದಲ್ಲಿ ಮೊದಲು ಕಾಣಿಸಿಕೊಂಡಿದ್ದು ರಾಜ್ಯದಲ್ಲೇ ಎನ್ನುವುದು ವಿಶೇಷ. ಗುಲ್ಬರ್ಗಾದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾ ವೈರಸ್ ಇಡೀ ದೇಶದಲ್ಲೇ ಸಾವಿನ ಸರಮಾಲೆಯನ್ನೇ ಸೃಷ್ಟಿಸಿತ್ತು. ಇದೀಗ ಚೀನಾವನ್ನು ಕಾಡುತ್ತಿರುವ ಎಚ್ಎಂಪಿವಿ ಕೂಡ ದೇಶದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ.
