ಉದಯವಾಹಿನಿ, ಬೆಂಗಳೂರು: ಪ್ರತಿಯೊಂದು ಇಲಾಖೆಯಲ್ಲೂ ವ್ಯವಸ್ಥಿತವಾಗಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಕಾಂಗ್ರೆಸ್ನದು ಶೇ.100ರಷ್ಟು ಕಮೀಷನ್ ಸರ್ಕಾರ ಎಂದು ಮಾಜಿ ಸಚಿವ, ಶಾಸಕ ಅಶ್ವಥ್ ನಾರಾಯಣ ಗಂಭೀರ ಆರೋಪ ಮಾಡಿದರು. ಈಗಿನದು 60% ಕಮೀಷನ್ ಸರ್ಕಾರ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ ಬೆನ್ನಲ್ಲೇ 100% ಕಮಿಷನ್ ಹೊಡೆಯುವುದರಲ್ಲಿ ಕಾಂಗ್ರೆಸಿಗರು ನಿಸ್ಸೀಮರು.
ಎಲ್ಲಾ ಇಲಾಖೆಗಳಲ್ಲೂ ಇದು ಜಗಜ್ಜಾಹಿರವಾಗಿದೆ ಎಂದು ದೂರಿದರು.ಎಚ್.ಡಿ.ಕುಮಾರಸ್ವಾಮಿ ಅವರು ಸುಖಾಸುಮನೆ ಸರ್ಕಾರದ ವಿರುದ್ಧ ಆರೋಪ ಮಾಡಿಲ್ಲ. ಹಿಟ್ ಅಂಡ್ ರನ್ ಮಾಡಿಲ್ಲ. ಎಲ್ಲಾ ಇಲಾಖೆಗಳಲ್ಲೂ ವ್ಯವಸ್ಥಿತವಾಗಿ ಕಮಿಷನ್ ನಡೆಯುತ್ತಲೇ ಇದೆ. ಇದರಲ್ಲಿ ಸುಳ್ಳೇನಿಲ್ಲ. ವಿಧಾನಸೌಧದ ಕಂಬಗಳು ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಿಂದ ಕೂಡಿವೆ. ಇದಕ್ಕಿಂತ ಬೇರೆ ಸಾಕ್ಷಿ ಏನು ಬೇಕಾಗಿದೆ ಎಂದು ಪ್ರಶ್ನಿಸಿದರು.
ಈ ಸರ್ಕಾರ ಆರಂಭದಿಂದಲೂ ಹಗರಣಗಳ ಮೇಲೆ ಹಗರಣ ನಡೆಸುತ್ತಿದೆ. ಬರೀ ಭ್ರಷ್ಟಾಚಾರ ಆಪಾದನೆಯಲ್ಲ. ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ವಾಲೀಕಿ ನಿಗಮದಲ್ಲಿ 100% ಭ್ರಷ್ಟಾಚಾರ ಅವರೇ ಒಪ್ಪಿಕೊಂಡಿದ್ದಾರೆ. ಚಂದ್ರಶೇಖರ್ ಆತಹತ್ಯೆಯಿಂದ ಈ ಪ್ರಕರಣ ಹೊರಗೆ ಬಂತು ಎಂದು ಹೇಳಿದರು.
ಪರಶುರಾಮ್ ಆತಹತ್ಯೆ ಮಾಡಿಕೊಂಡಿದ್ದೇಕೆ? ಎಸ್ಐ ಪೋಸ್ಟ್ಗೆ ವರ್ಗಾವಣೆಗೆ 35 ಲಕ್ಷ , ಇದರಲ್ಲೂ ಸಾಕ್ಷ್ಯ ಇದೆಯಲ್ಲವೇ? ಮುಡಾದಲ್ಲೂ ಸಾಕ್ಷಿ ಇದೆ. ಗುತ್ತಿಗೆದಾರ ಸಚಿನ್ ಆತಹತ್ಯೆ ಪ್ರಕರಣದಲ್ಲೂ ಸಾಕ್ಷಿ ಇದೆ.

Leave a Reply

Your email address will not be published. Required fields are marked *

error: Content is protected !!