ಉದಯವಾಹಿನಿ, ಬೆಂಗಳೂರು: ಸರ್ಕಾರಿ ತಾಂತ್ರಿಕ ತರಬೇತಿ ಸಂಸ್ಥೆ ಕಿಯೋನಿಕ್ಸ್ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಯಿಂದ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ.ಈ ಕುರಿತಂತೆ ಇಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು.2009ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರನ್ನು ಕಿಯೋನಿಕ್ಸ್ ಎಂ.ಡಿ ಹುದ್ದೆಯಿಂದ ವರ್ಗಾವಣೆ ಮಾಡಿ, ಡೆಪ್ಯೂಟಿ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್, ಇಂಟರ್ನಲ್ ಸೆಕ್ಯೂರಿಟಿ ವಿಭಾಗಕ್ಕೆ ವರ್ಗಾವಣೆ ಮಾಡಿದೆ.
