ಉದಯವಾಹಿನಿ, ಶಿವಮೊಗ್ಗ: ಬೈಕ್ ಕಳವು ಮಾಡಿದ್ದ ಆರೋಪದ ಮೇರೆಗೆ ಓರ್ವನನ್ನು ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಠಾಣೆ ಪೊಲೀಸರು ಬಂಧಿಸಿ, ಕಳವು ಮಾಡಿದ್ದ ಎರಡು ಬೈಕ್ ಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.
ಸೊರಬ ತಾಲೂಕಿನ ಹುಣಸವಳ್ಳಿ ಗ್ರಾಮದ ನಿವಾಸಿ ವೀರಭದ್ರಪ್ಪ (೪೦) ಬಂಧಿತ ಆರೊಪಿ ಎಂದು ಗುರುತಿಸಲಾಗಿದೆ. ೪-೧-೨೦೨೫ ರಂದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಜ. ೪ ರಂದು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಆರೋಪಿ ಬಂಧನದಿಂದ ಶಿರಾಳಕೊಪ್ಪ ಹಾಗೂ ಸಾಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದಿದ್ದ ತಲಾ ಒಂದೊಂದು ಬೈಕ್ ಕಳವು ಪ್ರಕರಣ ಬೆಳಕಿಗೆ ಬಂದಿದೆ. ೬೦ ಸಾವಿರ ರೂ. ಮೌಲ್ಯದ ಸ್ಟಾರ್ ಸಿಟಿ ಬೈಕ್ ಹಾಗೂ ೩೫ ಸಾವಿರ ರೂ. ಮೌಲ್ಯದ ಫ್ಯಾಷನ್ ಪ್ರೋ ಬೈಕ್ ನ್ನು ಆರೋಪಿಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!