ಉದಯವಾಹಿನಿ, ದಾವಣಗೆರೆ: ಜಿಲ್ಲೆಯ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಆವರಣದಲ್ಲಿ ಮಕರ ಸಂಕ್ರಾಂತಿ ಹಬ್ಬದ ದಿನ ಶ್ರೀ ವಚನಾನಂದ ಸ್ವಾಮೀಜಿ ದಿವ್ಯಸಾನ್ನಿಧ್ಯದಲ್ಲಿ ಜ.14 ರಂದು ಸರಳವಾಗಿ ಹರಜಾತ್ರೆ ಆಚರಿಸಲು ಸಮಾಜದವರು ತೀರ್ಮಾನಿಸಿದ್ದಾರೆ.ಹರಿಹರದ ಪಂಚಮಸಾಲಿ ಪೀಠದಲ್ಲಿ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ವತಿಯಿಂದ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆದ ಹರಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಸಮಾಜದ ಮುಖಂಡರು, ಧರ್ಮದರ್ಶಿಗಳು, ಭಕ್ತರು ಈ ಭಾರಿ ಸಾಂಪ್ರಾದಾಯಿಕವಾಗಿ ಒಂದು ದಿನ ಹರಜಾತ್ರೆ ನಡೆಸಲು ನಿರ್ಧರಿಸಿದ್ದಾರೆ ಎಂದು ಪೀಠದ ಆಡಳಿತಾಧಿಕಾರಿ ಡಾ.ಎಚ್.ಪಿ.ರಾಜ್‌ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹರಪೀಠದಲ್ಲಿ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿರುವುದು ಹಾಗೂ ಆರ್ಥಿಕ ಮುಗ್ಗಟ್ಟು ಕಾರಣದಿಂದ ಈ ಭಾರಿ ಸರಳವಾಗಿ ಹರಜಾತ್ರೆ ಆಚರಿಸಬೇಕೆಂದು ಸಮಾಜ ಮುಖಂಡರು, ಭಕ್ತರು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು. ಅದರಂತೆ ಈ ಭಾರಿ ಸಾಂಪ್ರಾದಾಯಿಕವಾಗಿ ಹರಜಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!