ಉದಯವಾಹಿನಿ, ಒಟ್ಟಾವಾ: ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಆಡಳಿತಾರೂಢ ಲಿಬರಲ್ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಈ ಹುದ್ದೆಗೆ ಕರ್ನಾಟಕ ಮೂಲದ ಸಂಸದ ಚಂದ್ರ ಆರ್ಯ ಹೆಸರು ಪ್ರಬಲವಾಗಿ ಕೇಳಿ ಬಂದಿದೆ. ಪ್ರಸ್ತುತ ಕೆನಡಾದಲ್ಲಿರುವ ಭಾರತೀಯ ಮೂಲದ ಸಂಸದ ಚಂದ್ರ ಆರ್ಯ ಅವರು ಪ್ರಧಾನಿ ಹುದ್ದೆಗೆ ತಮ್ಮ ಉಮೇದುವಾರಿಕೆಯನ್ನು ಪ್ರಕಟಿಸಿದ್ದಾರೆ. ಕೆನಡಾದ ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ಅವರು ಈ ಘೋಷಣೆ ಮಾಡಿದರು. ಕೆನಡಾದ ಮುಂದಿನ ಪ್ರಧಾನಿಯಾಗುವ ಮೂಲಕ ದೇಶದ ಪುನರ್ನಿರ್ಮಾಣ ಮತ್ತು ಸಮೃದ್ಧಿಯ ಕಡೆಗೆ ಕೆಲಸ ಮಾಡಲು ಬಯಸುತ್ತೇನೆ ಎಂದು ಸಾಮಾಜಿಕ ಮಾಧ್ಯಮ ವೇದಿಕೆ ಎಕ್‌್ಸನಲ್ಲಿ ಚಂದ್ರ ಆರ್ಯ ಅವರು ಪೋಸ್ಟ್ ಮಾಡಿದ್ದಾರೆ.
ಜಸ್ಟಿನ್ ಟ್ರುಡೊ ತಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮುಂದಿನ ಹೊಸ ನಾಯಕನನ್ನು ಆಯ್ಕೆ ಮಾಡುವವರೆಗೆ ದೇಶದ ಪ್ರಧಾನಿ ಹುದ್ದೆಯಲ್ಲಿ ಉಳಿಯುತ್ತಾರೆ. ಹೊಸ ಪ್ರಧಾನಿ ಆಯ್ಕೆಯಾದ ನಂತರ ಅವರು ಪ್ರಧಾನಿ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಲವು ನಾಯಕರು ಈಗ ಪ್ರಧಾನಿ ಹುದ್ದೆಯ ರೇಸ್ ನಲ್ಲಿದ್ದಾರೆ. ಇದೀಗ ಪ್ರಧಾನಿ ಹುದ್ದೆಯ ರೇಸ್‌ಗೆ ಹೊಸ ಹೆಸರು ಸೇರ್ಪಡೆಯಾಗಿದೆ. ನಾನು ಕೆನಡಾದ ಮುಂದಿನ ಪ್ರಧಾನಿ ಹುದ್ದೆಗೆ ಸ್ಪರ್ಧಿಸುತ್ತಿದ್ದೇನೆ, ಇದರಿಂದ ನಾನು ನಮ್ಮ ದೇಶವನ್ನು ಪುನರ್ನಿರ್ಮಿಸಲು ಮತ್ತು ಭವಿಷ್ಯದ ಪೀಳಿಗೆಗೆ ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳಬಹುದು. ಕೆನಡಾಕ್ಕೆ ದೊಡ್ಡ ಮತ್ತು ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಲು ಹೆದರದ ನಾಯಕತ್ವದ ಅಗತ್ಯವಿದೆ ಎಂದು ಅವರು ಹೇಳಿದರು.
