ಉದಯವಾಹಿನಿ, ಕೋಲಾರ: ಅಮರಶಿಲ್ಪಿ ಜಕಣಾಚಾರಿ ಅವರು ಶಿಲ್ಪ ಕಲೆಗೆ ಅಪಾರ ಕೊಡುಗೆ ನೀಡಿದ್ದು, ಸೂರ್ಯಚಂದ್ರ ಇರುವರೆಗೂ ಇವರ ಹೆಸರು ಅಮರವಾಗಿ ಇರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಹೇಳಿದರು.
ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಇಂದು ಹಮ್ಮಿಕೊಂಡಿದ್ದ, ಅಮರ ಶಿಲ್ಪಿ ಜಕಣಾಚಾರಿ ಅವರು ಸಂಸ್ಮರಣಾ ದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಕನ್ನಡ ನಾಡಿನ ಇತಿಹಾಸದಲ್ಲಿ ಹೊಯ್ಸಳರು ತಮ್ಮದೇ ಆದ ಕೊಡುಗೆಯನ್ನು ಶಿಲ್ಪ ಕಲೆಗೆ ನೀಡಿದ್ದಾರೆ. ಇವರಲ್ಲಿ ವಿಷ್ಣುವರ್ಧನ ಅರಸನಕಾಲದಲ್ಲಿ ಕಲೆಯು ಉತ್ತುಂಗ ಶಿಖರದಲ್ಲಿತ್ತು. ವಿಷ್ಣುವರ್ಧನನ ಹೆಂಡತಿ ಶಾಂತಲೆ ನಾಟ್ಯ ರಾಣಿ ಎಂದು ಪ್ರಸಿದ್ಧಿಯಾಗಿದ್ದಳು. ಈ ಕಾಲದಲ್ಲಿದ್ದ ಅಮರಶಿಲ್ಪಿ ಜಕಣಾಚಾರಿ ಬೇಲೂರು ಹಳೆಬೀಡಿನ ಚನ್ನಕೇಶವ ದೇವಾಲಯದಲ್ಲಿ ಶಿಲ್ಪಗಳನ್ನು ಕೆತ್ತನೆ ಮಾಡಿ ಹೆಸರಾಗಿದ್ದಾರೆ ಎಂದರು. ವಿಶ್ವಕರ್ಮ ಸಮುದಾಯದ ಮುಖಂಡರಾದ ಕಲಾವಿದ ವಿಷ್ಣು ಮಾತನಾಡಿ, ಒಳ್ಳೆಯ ಕೆಲಸ ಹಾಗೂ ಒಳ್ಳೆಯ ಸೇವೆಮಾಡಿದರೆ ಸಮಾಜದಲ್ಲಿ ಶಾಶ್ವತವಾಗಿ ಉಳಿಯುತ್ತೇವೆ. ಎಲ್ಲರೊಂದಿಗೆ ಸೌಹಾರ್ದತೆಯಿಂದ ಇರಬೇಕು. ವಿಶ್ವ ಕರ್ಮಸಮುದಾಯವು ಪಂಚ ಕಸುಬುಗಳನ್ನು ಅವಲಂಬಿಸಿದ್ದು, ಇವುಗಳನ್ನು ಜೀವಂತವಾಗಿ ಉಳಿಸಿಕೊಂಡುಹೋಗಬೇಕು ಎಂದರು.

Leave a Reply

Your email address will not be published. Required fields are marked *

error: Content is protected !!