ಉದಯವಾಹಿನಿ, ಅಯೋಧ್ಯೆ: ಹಿಂದೂಗಳ ಆರಾಧ್ಯೆ ದೈವ, ಮಾರ್ಯದಾ ಪುರುಷೋತ್ತಮ ಶ್ರೀರಾಮನ ಜನಸ್ಥಳವಾದ ಆಯೋಧ್ಯೆಯಲ್ಲಿ ರಾಮಲಲ್ಲಾನ ಭವ್ಯ ಮಂದಿರ ಆರಂಭವಾಗಿ ಇದೀಗ ಒಂದು ವರ್ಷ ಪೂರ್ಣಗೊಂಡಿದೆ.
ಅಯೋಧ್ಯೆ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದ ಸಂಭ್ರಮ ಇಂದಿನಿಂದ ಮೂರು ದಿನಗಳ ಕಾಲ ಜರುಗಲಿದೆ.ಸಾಂಸ್ಕೃತಿಕ, ಆಧ್ಯಾತಿಕತೆಯ ರಾಜಧಾನಿಯಂತಿರುವ ಉತ್ತರ ಪ್ರದೇಶದಲ್ಲಿ ಇದೀಗ ಅಯೋಧ್ಯೆಯೇ ದೇಶದ ಗಮನ ಸೆಳೆಯುತ್ತಿರುವುದು. ಅದಕ್ಕೆಲ್ಲ ಕಾರಣ ಅಲ್ಲಿ ಏನೆಲ್ಲಾ ಬೆಳವಣಿಗೆ ನಡೆಯುತ್ತಿದೆ ಎಂಬುದು.
ಅಯೋಧ್ಯೆಯಲ್ಲಿನ ರಾಮ ಮಂದಿರವು ಹಿಂದೂ ಧರ್ಮೀಯರ ಜೀವಾಳವಾಗಿದೆ.2024ರಲ್ಲಿ ಅಂದರೆ, ಕಳೆದ ವರ್ಷವಷ್ಟೇ ಅಯೋಧ್ಯೆಯಲ್ಲಿ ರಾಮ ದೇವಾಲಯದ ನಿರ್ಮಾಣ ಕಾರ್ಯ ಪೂರ್ಣಗೊಂಡು ಕೋಟ್ಯಂತರ ಜನರು ಇಲ್ಲಿನ ರಾಮನ ದರ್ಶನ ಪಡೆದುಕೊಂಡಿದ್ದಾರೆ. ಹಿಂದೂ ಪಂಚಾಂಗದ ಪ್ರಕಾರಲ್ಲಿ ಜ.11ರಿಂದ 13ರವರೆಗೆ ಪ್ರತಿಷ್ಠಾ ವಾರ್ಷಿಕೋತ್ಸವ (ಪ್ರತಿಷ್ಠಾ ದ್ವಾದಶಿ) ಹಮಿಕೊಳ್ಳಲಾಗಿದೆ. ಮೊದಲ ದಿನ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಬಾಲ ರಾಮನಿಗೆ ಅಭಿಷೇಕ ನೆರವೇರಿಸಲಿದ್ದಾರೆ. ಮಂದಿರದ ಸಮೀಪವಿರುವ ಅಂಗದ ಟೀಲಾದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜತೆಗೆ, ಖ್ಯಾತ ಗಾಯಕರ ಭಕ್ತಿ ಗೀತೆಗಳೂ ಬಿಡುಗಡೆಗೊಳ್ಳಲಿವೆ. ದೇಶಾದ್ಯಂತವಿರುವ ಸಂತರು ಹಾಗೂ ಭಕ್ತರಿಗೆ ಟ್ರಸ್ಟ್‌ ಆಮಂತ್ರಣ ಕಳುಹಿಸಿದೆ. ಈಗಾಗಲೇ ಅಯೋಧ್ಯೆಯ ರಾಮ ಮಂದಿರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಒಂದೊಂದೇ ಕಾರ್ಯಕ್ರಮಗಳು ನೆರವೇರುತ್ತಿವೆ.

Leave a Reply

Your email address will not be published. Required fields are marked *

error: Content is protected !!