ಉದಯವಾಹಿನಿ, ವಿಜಯಪುರ: ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು ತಾನೂ ಕಾಲುವೆಗೆ ಹಾರಿ ತಾಯಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದು, ನಾಲ್ಕು ಮಕ್ಕಳು ಜಲಸಮಾಧಿಯಾಗಿದ್ದಾರೆ.
ತಾಯಿಯನ್ನು ಸ್ಥಳೀಯರು ಕಾಪಾಡಿದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಬೇನಾಳ ಬಳಿಯ
ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ಸೋಮವಾರ ನಡೆದಿದೆ.
ಕೊಲ್ಹಾರ ತಾಲ್ಲೂಕಿನ ತೆಲಗಿ ಗ್ರಾಮದ ತನು ನಿಂಗರಾಜ ಭಜಂತಿ (5), ರಕ್ಷಾ ನಿಂಗರಾಜ ಭಜಂತ್ರಿ (3), ಹಸೇನ ನಿಂಗರಾಜ ಭಜಂತ್ರಿ ಹಾಗೂ ಹುಸೇನ ನಿಂಗರಾಜ ಭಜಂತ್ರಿ (13 ತಿಂಗಳು) ಮೃತ ಮಕ್ಕಳು.
ಮಕ್ಕಳ ತಾಯಿ ಭಾಗ್ಯ ಭಜಂತ್ರಿ ಎಂಬುವಳನ್ನು ಸ್ಥಳೀಯರು ಕಾಪಾಡಿದ್ದಾರೆ. ತಾಯಿ ಬದುಕುಳಿದಿದ್ದಾಳೆ. ಆಕೆಯ ನಾಲ್ವರು ಮಕ್ಕಳು ಜಲ ಸಮಾಧಿಯಾಗಿದ್ದಾರೆ. ಕೌಟುಂಬಿಕ ಕಾರಣವೇ ಘಟನೆಗೆ ಕಾರಣ ಎನ್ನಲಾಗಿದೆ.
ಇಬ್ಬರು ಹೆಣ್ಣು ಮಕ್ಕಳ ಶವವನ್ನು ಮೀನುಗಾರರು ಹೊರ ತಗೆದಿದ್ದಾರೆ.
ಇಬ್ಬರು ಗಂಡು ಮಕ್ಕಳ ಶವಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.
ಸ್ಥಳಕ್ಕೆ ನಿಡಗುಂದಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದು, ಪರಿಹಾರ ಕಾರ್ಯ ಕೈಗೊಂಡಿದ್ದಾರೆ. ನಿಡಗುಂದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
