ಉದಯವಾಹಿನಿ, ಬೆಂಗಳೂರು: ಕಾರನ್ನು ಬೀದಿ ನಾಯಿ ಮೇಲೆ ಹತ್ತಿಸಿ ಹತ್ಯೆಗೈದ ಅಮಾನವೀಯ ಘಟನೆ ದಿ.೪ ರಂದು ಸಹಕಾರ ನಗರದ ಎಫ್ ಬ್ಲಾಕ್ ನ ೧೪ನೇ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ, ದೀಪಕ್ ಧನಂಜಯ್ ಶೋಧನ್ ಎಂಬುವವರು ನೀಡಿದ ದೂರಿನ ಮೇರೆಗೆ ಆರೋಪಿ ಥಾರ್ ಕಾರು ಚಾಲಕನ ವಿರುದ್ಧ ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜ. ೪ರ ರಾತ್ರಿ, ವೇಗವಾಗಿ ಬಂದ ಥಾರ್ ಚಾಲಕನು ತನ್ನ ಕಾರನ್ನು ರಸ್ತೆಯ ಪಕ್ಕದಲ್ಲಿ ಮಲಗಿದ್ದ ನಾಯಿಮರಿಗಳ ಮೇಲೆ ಹಾಸಿದ್ದಾನೆ. ಈ ವೇಳೆ ಪಕ್ಕದ ಮಲಗಿದ ನಾಯಿಯೊಂದು ಕಾರಿನ ಚಕ್ರಕ್ಕೆ ಸಿಲುಕಿ ಒದ್ದಾಡಿ ಸ್ಥಳದಲ್ಲೇ ಸಾವನ್ನಪ್ಪಿದೆ. ನಾಯಿಗಳಿಗೆ ಆಹಾರ ನೀಡುತ್ತಿದ್ದ ನೆರೆಹೊರೆಯವರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಥಾರ್ ಚಾಲಕನ ಕೃತ್ಯ ಬೆಳಕಿಗೆ ಬಂದಿದೆ. ಘಟನೆಗೆ ಸ್ಥಳೀಯರು ಹಾಗೂ ಪ್ರಾಣಿ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ದೀಪಕ್ ಧನಂಜಯ್ ಶೋಧನ್ ನೀಡಿದ ದೂರಿನ ಆಧಾರದ ಮೇಲೆ ಜನವರಿ ೧೪ ರಂದು ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
