ಉದಯವಾಹಿನಿ, ಬೆಂಗಳೂರು: ಡಾ.ರಾಜ್ ಅವರ ಬದುಕಿನಿಂದ ನಾವು ಕಲಿಯಬೇಕಾದ್ದು, ರೂಢಿಸಿಕೊಳ್ಳಬೇಕಾದ್ದು ತುಂಬಾ ಇದೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಅವರು ಇಂದು ಡಾ.ರಾಜ್ ಕುಮಾರ್ ಅಕಾಡೆಮಿ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 2022ರ ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ರಾಜ್ಯದ ಅಭ್ಯರ್ಥಿಗಳ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು, ಮಾತನಾಡಿದರು.ಇದೇ ವೇಳೇ ಅವರು ನಾನು ರಾಜ್‌ಕುಮಾರ್ ಅವರನ್ನು ಭೇಟಿ ಮಾಡಲು ಹೋದಾಗಲೆಲ್ಲ, ‘ಬನ್ನಿ, ಬನ್ನಿ ನಮ್ ಕಾಡಿನವರು’ ಎಂದು ಖುಷಿಯಿಂದ ಕರೆಯುತ್ತಿದ್ದರು. ಡಾ.ರಾಜ್ ಕುಮಾರ್ ಅವರದ್ದು ಅತ್ಯಂತ ಸರಳ ವ್ಯಕ್ತಿತ್ವ . ಪ್ರತಿಯೊಬ್ಬರನ್ನೂ ಗೌರವದಿಂದ ಕಾಣುವ ಮೇರು ಸಂಸ್ಕಾರದ ರಾಯಭಾರಿ ಆಗಿದ್ದವರು.ಡಾ.ರಾಜ್ ಅವರ ಬದುಕಿನಿಂದ ನಾವು ಕಲಿಯಬೇಕಾದ್ದು, ರೂಢಿಸಿಕೊಳ್ಳಬೇಕಾದ್ದು ತುಂಬಾ ಇದೆ. ಡಾ.ರಾಜ್ ಕುಮಾರ್ ಅಕಾಡೆಮಿ ಅಪಾರ ಯಶಸ್ಸು ಗಳಿಸಲು ರಾಘವೇಂದ್ರ ರಾಜ್‌ಕುಮಾರ್ ಮತ್ತು ಅಕಾಡೆಮಿ ಸಿಬ್ಬಂದಿಯ ಕೊಡುಗೆ ಅಪಾರ.ಈ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆದು ದೇಶಸೇವೆಯ ಕನಸು ಕಟ್ಟಿಕೊಂಡಿರುವ ಅಸಂಖ್ಯ ಮನಸುಗಳಿಗೆ ಆಸರೆಯಾಗಲಿ ಎಂದು ಹಾರೈಸುತ್ತೇನೆ ಜಾತಿ ತಾರತಮ್ಯದ ಕಾರಣದಿಂದ ಶಿಕ್ಷಣದಿಂದ ವಂಚಿತರಾದವರು ಬಹಳಷ್ಟು ಜನರಿದ್ದಾರೆ. ಅವರಿಗೆ ಶಿಕ್ಷಣದ ಜೊತೆಗೆ ಬದುಕಿನ ಅವಕಾಶಗಳೂ ದೊರಕುವುದಿಲ್ಲ. ಯುಪಿಎಸ್‌ಸಿ ನಲ್ಲಿ ತೇರ್ಗಡೆ ಹೊಂದಿದವರು ಈ ಅಸಮಾನತೆ ಮತ್ತು ಜಾತಿ ವ್ಯವಸ್ಥೆಯನ್ನು ಅಳಿಸುವ ಮೂಲಕ ದೇಶದ ಮತ್ತು ಸಮಾಜದ ಪ್ರಗತಿಗೆ ಶ್ರಮಿಸಬೇಕು ಅಂತ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!