ಉದಯವಾಹಿನಿ, ಗದಗ: ಬೆಳಗಾವಿಯಲ್ಲಿ ಜ.21ರಂದು ನಡೆಯುವ ಬೃಹತ್ ಕಾಂಗ್ರೆಸ್ ಸಮಾವೇಶದ ಅಂಗವಾಗಿ ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿ ಜ.17ರಂದು ಸಂಜೆ 4.30ಕ್ಕೆ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ, ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ, ಕೆಪಿಸಿಸಿ ಉಪಾಧ್ಯಕ್ಷ ಡಿ.ಆರ್.ಪಾಟೀಲ, ಗದಗ ಜಿಲ್ಲಾ ಕೆಪಿಸಿಸಿ ವೀಕ್ಷಕ ಎಂ.ಬಿ.ಸೌಧಾಗಾರ ಹಾಗೂ ಮೋಹನ್ ಅಸುಂಡಿ ಹಾಗೂ ಐತಿಹಾಸಿಕ ಸಮಾವೇಶವನ್ನು ಯಶಸ್ವಿಗೊಳಿಸಲು ಕಿತ್ತೂರ ಕರ್ನಾಟಕ ವಿಭಾಗದ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳಿಗೆ ಉಸ್ತುವಾರಿಯಾಗಿ ನೇಮಿಸಿದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ,ಶ್ರೀನಿವಾಸ್ ಎನ್.ಟಿ. ಹಾಗೂ ಗದಗ ಜಿಲ್ಲೆಯ ಮಾಜಿ ಶಾಸಕರಾದ ಜಿ.ಎಸ್.ಗಡ್ಡದೇವರಮಠ, ಬಿ.ಆರ್.ಯಾವಗಲ್, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ ಸೇರಿ ಸಭೆಯಲ್ಲಿ ಕೆಪಿಸಿಸಿ ಉಸ್ತುವಾರಿಗಳು ಹಾಗೂ ಮಾಜಿ ಶಾಸಕರು ಪಾಲ್ಗೊಳ್ಳುವರು. ಈ ಸಭೆಯಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಎಲ್ಲ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ ಮಂದಾಲಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
