ಉದಯವಾಹಿನಿ, ಮೈಸೂರು: ಬಿಜೆಪಿಯಿಂದ ಮಾಜಿ ಸಂಸದ ಪ್ರತಾಪ ಸಿಂಹ ಅವರನ್ನು ಉಚ್ಚಾಟನೆ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಎಸ್.ಟಿ.ಮೊರ್ಚಾ ರಾಜ್ಯ ಕಾರ್ಯಕಾರಿ ಸದಸ್ಯ ಮೈ.ಕಾ.ಪ್ರೇಮ್ ಕುಮಾರ್ ಹಾಗೂ ಬಿಜೆಪಿ ಮುಖಂಡ ಕುಮಾರ್ ಗೌಡ ಮನವಿ ಸಲ್ಲಿಸಿದರು. ಕಾಯಕ್ರಮ ಒಂದರಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ್ದ ಬಿ.ವೈ.ವಿಜಯೇಂದ್ರ ಅವರನ್ನು ಭೇಟಿಯಾದ ಮೈ.ಕಾ.ಪ್ರೇಮ್ ಕುಮಾರ್ ಹಾಗೂ ಕುಮಾರ್‍ಗೌಡ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಪಕ್ಷ ವಿರೋಧಿ ಚಟುವಟಿಕೆ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಸುಮಾರು ಮೂವತ್ತು ವರ್ಷಗಳಿಗೂ ಹೆಚ್ಚು ಕಾಲದಿಂದ ನಾವುಗಳು ಹಿಂದೂ ಸಂಘಟನೆ ಸೇರಿದಂತೆ ಭಾರತೀಯ ಜನತಾ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿ ಮತ್ತು ಬ್ಲಾಕ್ ಮಟ್ಟದ, ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದು ಸರಿಯಷ್ಟೇ. ಇತ್ತೀಚಿನ ದಿನಗಳಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಂದಾಗಿ ಪಕ್ಷಕ್ಕೆ ಉಂಟಾಗುತ್ತಿರುವ ಹಾನಿ ಮತ್ತು ಮುಜುಗರ ನಮಗೆ ತೀವ್ರ ಬೇಸರವನ್ನು ಉಂಟು ಮಾಡಿವೆ.

Leave a Reply

Your email address will not be published. Required fields are marked *

error: Content is protected !!