ಉದಯವಾಹಿನಿ, ನವದೆಹಲಿ: ಕೇಂದ್ರ ಬಜೆಟ್ 2025-26ರ ಮಂಡನೆಗೆ ದಿನಾಂಕ ಘೋಷಣೆಯಾಗಿದೆ. 2024ರ ಲೋಕಸಭೆ ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3.0 ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಂಡನೆಯಾಗುತ್ತಿರುವ ಮೊದಲ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ.
ಆದ್ದರಿಂದ ಬಜೆಟ್ ಮೇಲೆ ಜನರು ಸಹ ಅಪಾರವಾದ ನಿರೀಕ್ಷೆಯನ್ನು ಹೊಂದಿದ್ದಾರೆ.
ಜನವರಿ 31ರಂದು ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮೊದಲ ದಿನ ರಾಷ್ಟ್ರಪತಿ ಬ್ರೌಪದಿ ಮುರ್ಮು ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದಾರೆ. ಫೆಬ್ರವರಿ 1ರ ಶನಿವಾರ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2025-26 ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನದ ದಿನಾಂಕಗಳು: ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯ ಬಜೆಟ್ ಅಧಿವೇಶನದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಜನವರಿ 31ರ ಶುಕ್ರವಾರ ರಾಷ್ಟ್ರಪತಿ ದೌಪದಿ ಮುರ್ಮು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದೆ. ಫೆಬ್ರವರಿ 1ರ ಶನಿವಾರ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಅಧಿವೇಶನದ ಮೊಲದ ಹಂತದ ಕಲಾಪ 13 ಫೆಬ್ರವರಿ ತನಕ ನಡೆಯಲಿದೆ. ಮಾರ್ಚ್ 10 ರಿಂದ ಏಪ್ರಿಲ್ 4ರ ತನಕ 2ನೇ ಹಂತದ ಕಲಾಪ ನಡೆಯಲಿದೆ. ಕೇಂದ್ರ ಬಜೆಟ್ 2025-26ಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ವಿವಿಧ ವಲಯಗಳ ಪ್ರತಿನಿಧಿಗಳೊಂದಿಗೆ ಬಜೆಟ್ ಪೂರ್ವ ಸಮಾಲೋಚನೆ ಸಭೆಯನ್ನು ನಡೆಸುತ್ತಿದ್ದಾರೆ. ವಿವಿಧ ವಲಯಗಳ ನಿರೀಕ್ಷೆಗಳ ಕುರಿತು ಮಾಹಿತಿಯನ್ನು ಸಂಗ್ರಹ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!