ಉದಯವಾಹಿನಿ, ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದಂತ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಅದರಲ್ಲಿ ಒಂದು ಶಕ್ತಿ ಯೋಜನೆಯನ್ನು ನಾಳೆ ಅಧಿಕೃತವಾಗಿ ಲೋಕಾರ್ಪಣೆಗೊಳಿಸಲಿದೆ. ಆ ಬಳಿಕ ಮಧ್ಯಾಹ್ನ 1 ಗಂಟೆಯಿಂದ ರಾಜ್ಯಾಧ್ಯಂತ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಫ್ರೀ ಟಿಕೆಟ್ ನೀಡಿ ಸಂಚಾರ ಸೌಲಭ್ಯಕ್ಕೆ ಅವಕಾಶ ದೊರೆಯಲಿದೆ.ರಾಜ್ಯದ ಎಲ್ಲಾ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ʼಶಕ್ತಿʼ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಮುಖ್ಯ ಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ನಾಳೆ, ಜೂನ್ 11 ರಂದು ಚಾಲನೆ ನೀಡಲಿದ್ದಾರೆ.ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳಲ್ಲಿ ಕಾರ್ಯಗತವಾಗಿರುವ ಮೊದಲ ಯೋಜನೆ ಇದಾಗಿದ್ದು, ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳೊಳಗಾಗಿ ಜಾರಿಗೊಳ್ಳುತ್ತಿರುವುದು ಗಮನಾರ್ಹವಾಗಿದೆ.ಮಧ್ಯಾಹ್ನ 1 ಗಂಟೆಯಿಂದ ರಾಜ್ಯಾಧ್ಯಂತ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಫ್ರೀ ಫ್ರೀ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ʼಶಕ್ತಿʼ ಯೋಜನೆಗೆ ಚಾಲನೆ ನೀಡುವ ಮೂಲಕ ಮಹಿಳಾ ಸಬಲೀಕರಣದತ್ತ ಹೊಸ ಹೆಜ್ಜೆಗೆ ಮುನ್ನುಡಿ ಬರೆಯಲಿದ್ದಾರೆ. ಇದೇ ಸಂದರ್ಭದಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವವ್ಯಾಪ್ತಿಯಲ್ಲಿ ಶಾಸಕರು ಈ ಯೋಜನೆಗೆ ಚಾಲನೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಮಧ್ಯಾಹ್ನ 1.00 ಗಂಟೆಯ ನಂತರ ಮಹಿಳಾ ಪ್ರಯಾಣಿಕರಿಗೆ ಈ ಸೌಲಭ್ಯ ದೊರೆಯಲಿದೆ.
