ಉದಯವಾಹಿನಿ: ಬೆಂಗಳೂರು: ಬಿಗ್‌ಬಾಸ್ ರಿಯಾಲಿಟಿ ಶೋ ಭಾನುವಾರ ಮುಕ್ತಾಯಗೊಳ್ಳಲಿದೆ. ಬಿಗ್‌ಬಾಸ್ ೧೧ ಸೀಸನ್ ನಿರೂಪಣೆ ಮಾಡಿದ ಹೆಗ್ಗಳಿಕೆ ಸುದೀಪ್ ಅವರದ್ದು. ಈ ಸೀಸನ್ ಕೊನೆಯ ನಿರೂಪಣೆ ಎಂದಿರುವ ಕಿಚ್ಚ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.
ಕಳೆದ ೧೧ ಸೀಸನ್‌ಗಳಿಂದ ನಾನು ಬಿಗ್‌ಬಾಸ್ ಅನ್ನು ತುಂಬಾ ಇಷ್ಟಪಟ್ಟಿದ್ದೇನೆ. ನೀವು ತೋರಿಸಿದ ಪ್ರೀತಿಗೆ ಧನ್ಯವಾದಗಳು. ಮುಂಬರುವ ಫೈನಲ್ ನನ್ನ ಕೊನೆಯ ನಿರೂಪಣೆ. ನಿಮ್ಮನ್ನು ಮನರಂಜಿಸಲು ನಾನು ಪ್ರಯತ್ನಿಸುತ್ತೇನೆ. ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು. ಇದನ್ನು ಉತ್ತಮ ರೀತಿಯಲ್ಲಿ ನಿಭಾಯಿಸಿದ್ದೇನೆ ಎಂಬ ಸಂತೋಷ ನನಗಿದೆ. ಈ ಅವಕಾಶ ಕೊಟ್ಟ ಕಲರ್ಸ್ ಕನ್ನಡ ವಾಹಿನಿಗೆ ಧನ್ಯವಾದಗಳು. ನಿಮ್ಮೆಲ್ಲರ ಮೇಲೂ ಅಪಾರವಾದ ಪ್ರೀತಿ ಮತ್ತು ಗೌರವವಿದೆ ಎಂದು ಕಿಚ್ಚ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!