ಉದಯವಾಹಿನಿ, ಮೈಸೂರು: ಹೆಣ್ಣು ಮಕ್ಕಳಿಗೆ ಸಮಾಜದಲ್ಲಿ ಹಾಗೂ ಕಚೇರಿಯಲ್ಲಿ ಸಮಾನತೆಯನ್ನು ಕೊಟ್ಟು ಗೌರವದಿಂದ ಕಾಣಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕುಮಾರಸ್ವಾಮಿ ಪಿ.ಸಿ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟೀಯ ಹೆಣ್ಣು ಮಕ್ಕಳ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೆಣ್ಣು ಮಕ್ಕಳ ಹಕ್ಕುಗಳಿಗೆ ಚ್ಯುತಿ ಬಾರದಂತೆ ನಡೆದುಕೊಳ್ಳಬೇಕು. ಅವರ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಅವರನ್ನು ರಕ್ಷಣೆ ಮಾಡಬೇಕು. ಹೆಣ್ಣು ಭ್ರೂಣ ಹತ್ಯೆ ಹಾಗೂ ತಾಯಿ ಮರಣ ಮತ್ತು ಶಿಶು ಮರಣ ತಡೆಗಟ್ಟಲು ಹೆಣ್ಣು ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದರು.
ಕೊಡಗು ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್, ಮೈಸೂರು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಗೋಪಿನಾಥ್.ಎಸ್, ಕೊಡಗು ಜಿಲ್ಲೆಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಮೈಸೂರು ಜಿಲ್ಲೆಯ ಕಚೇರಿಯ ಅಧಿಕಾರಿ ಜಯಪ್ರಕಾಶ್ ಹಾಗೂ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಬೃಂದಾ, ಹೆಚ್.ಡಿ.ಕೋಟೆ ತಾಲೂಕಿನ ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
