ಉದಯವಾಹಿನಿ, ಮೈಸೂರು: ತಮ್ಮ ಪ್ರಯಾಣದ ವೇಳೆ ಝೀರೋ ಟ್ರಾಫಿಕ್ ಮಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಯಾಕಾಗಿ ಝೀರೋ ಟ್ರಾಫಿಕ್ ಮಾಡಿದ್ದೀರಾ? ಎಂದು ಮೈಸೂರು ಪೊಲೀಸ್ ಆಯುಕ್ತರನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.ಸಿಎಂ ಸಿದ್ದರಾಮಯ್ಯ ಮೈಸೂರು ವಿಮಾನ ನಿಲ್ದಾಣದಿಂದ ಜಿಲ್ಲಾ ಪಂಚಾಯತ್ ಕಚೇರಿಗೆ ಆಗಮಿಸಿದ್ದರು.
ಈ ವೇಳೆ ಅವರಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದರಿಂದ ಸಿಟ್ಟಾದ ಸಿದ್ದರಾಮಯ್ಯ ಪೊಲೀಸ್ ಆಯುಕ್ತರನ್ನು ಪ್ರಶ್ನಿಸಿ, ‘ನಿಮಗೆ ಗೊತ್ತಿದೆಯಾ, ನಾನು ಝೀರೋ ಟ್ರಾಫಿಕ್ ಮಾಡಬೇಡಿ ಎಂದು ಹೇಳಿದ್ದೇನೆ. DONT DO THAT’ ಎಂದು ಹೇಳುತ್ತಾ ಖಡಕ್ ವಾರ್ನಿಂಗ್ ನೀಡಿದ ಘಟನೆ ಜಿ.ಪಂ ಆವರಣದಲ್ಲಿ ನಡೆದಿದೆ.ಝೀರೋ ಟ್ರಾಫಿಕ್ ಸೌಲಭ್ಯ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ ಸಿದ್ದರಾಮಯ್ಯ ಎರಡನೇ ಬಾರಿಗೆ ಸಿಎಂ ಆಗಿ ಅಧಿಕಾರ ವಹಿಸುತ್ತಿದ್ದಂತೆ ತಮ್ಮ ವಾಹನ ಸಂಚಾರಕ್ಕೆ ನೀಡಲಾಗಿದ್ದ ಝೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂಪಡೆಯುವಂತೆ ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದರು. ಝೀರೋ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದರು.
