ಉದಯವಾಹಿನಿ, ಮಹಾಕುಂಭ ನಗರ: ಕೇಂದ್ರ ಗಹ ಸಚಿವ ಅಮಿತ್ ಶಾ ಅವರು ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಅಮಿತ್ ಶಾಗೆ ಉತ್ತರಪ್ರದೇಶ್ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಸಾತ್ ನೀಡಿದ್ದಾರೆ.
ಮಹಾಕುಂಭ ಮೇಳ 2025 ರಲ್ಲಿ ಭಾಗವಹಿಸಲು ಬೆಳಗ್ಗೆ 11.30ರ ಸುಮಾರಿಗೆ ಪ್ರಯಾಗ್‌ರಾಜ್‌ಗೆ ತಲುಪಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಂತರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಸ್ವಾಗತಿಸಿದರು. ಅಲ್ಲಿಂದ ಕುಂಭಮೇಳೆ ನಡೆಯುತ್ತಿರುವ ಸ್ಥಳಕ್ಕೆ ತೆರಳಿದರು. ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಅವರು ಬಡೇ ಹನುಮಾನ್ ಜಿ ದೇವಸ್ಥಾನ ಮತ್ತು ಅಭಯವತ್‌ಗೆ ಭೇಟಿ ನೀಡಿದರು. ಜನವರಿ 13ರಂದು ಆರಂಭವಾದ ಮಹಾಕುಂಭ ಫೆಬ್ರವರಿ 26ರವರೆಗೆ ನಡೆಯಲಿದೆ.ಫೆ. 5 ರಂದು ಪ್ರಧಾನಿ ನರೇಂದ್ರ ಮೋದಿ ಪವಿತ್ರ ಸ್ನಾನ ಮಾಡಲಿದ್ದಾರೆ.
