ಉದಯವಾಹಿನಿ, ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಂದ ವಶಪಡಿಸಿಕೊಳ್ಳಲಾಗಿದ್ದ ಬೆಲೆಬಾಳುವ ವಸ್ತುಗಳು ಮತ್ತು ಆಸ್ತಿಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ಫೆಬ್ರವರಿ ೧೪ ಮತ್ತು ೧೫ ರಂದು ಎರಡು ದಿನಗಳನ್ನು ನಿಗದಿಪಡಿಸಿ ನಗರದ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಸಿಬಿಐ/ಇಡಿ ಪ್ರಕರಣಗಳ ವಿಚಾರಣೆ ನಡೆಸಲು ಸ್ಥಾಪನೆಯಾಗಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಮೋಹನ್ ಎಚ್‌ಎ ಆದೇಶ ಹೊರಡಿಸಿ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ದಿನಾಂಕಗಳನ್ನು ನಿಗದಿಪಡಿಸಿದ್ದಾರೆ.
ಜಪ್ತಿ ಮಾಡಲಾದ ಬೆಲೆಬಾಳುವ ವಸ್ತುಗಳು ಮತ್ತು ಆಸ್ತಿ ಮೇಲಿನ ಹಕ್ಕುಗಳನ್ನು ಕೋರಿ ಜಯಲಲಿತಾ ಅವರ ಕಾನೂನು ವಾರಸುದಾರರಾದ ಜೆ ದೀಪಕ್ ಮತ್ತು ಜೆ ದೀಪಾ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿ ಅವುಗಳ ಹಸ್ತಾಂತರಕ್ಕೆ ಕೋರ್ಟ್ ದಿನ ನಿಗದಿಪಡಿಸಿದೆ.
ಬೆಲೆಬಾಳುವ ವಸ್ತುಗಳು ಮತ್ತು ಆಸ್ತಿಯನ್ನು ತಮಿಳುನಾಡಿಗೆ ಹಸ್ತಾಂತರ ಮಾಡುವ ವಿಶೇಷ ನ್ಯಾಯಾಲಯದ ಆದೇಶವನ್ನು ೨೦೨೩ ರ ಜುಲೈ ೧೨ ರಂದು ಹೈಕೋರ್ಟ್ ಎತ್ತಿಹಿಡಿದಿತ್ತು. ಆದರೆ, ಅದರ ವಿರುದ್ಧ ಮತ್ತೆ ಮೇಲ್ಮನವಿ ಸಲ್ಲಿಕೆಯಾಗಿತ್ತು.ಕಳೆದ ೨೦೨೪ ರ ಫೆಬ್ರವರಿ ೧೯ ರಂದು, ವಿಶೇಷ ನ್ಯಾಯಾಲಯವು ಬೆಲೆಬಾಳುವ ವಸ್ತುಗಳು, ಚಿನ್ನ ಮತ್ತು ವಜ್ರದ ಆಭರಣಗಳನ್ನು ಹಿಂದಿರುಗಿಸಲು ದಿನಾಂಕವನ್ನು ನಿಗದಿಪಡಿಸಿತ್ತು.

 

Leave a Reply

Your email address will not be published. Required fields are marked *

error: Content is protected !!