ಉದಯವಾಹಿನಿ, ಬಳ್ಳಾರಿ : ರಂಗ ಜಂಗಮ ಸಂಸ್ಥೆ (ರಿ) ಡಿ ಕಗ್ಗಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಸಾಂಸ್ಕೃತಿಕೋತ್ಸವ 2025 ಕಾರ್ಯಕ್ರಮವನ್ನು ಸಿದ್ದಮ್ಮನಹಳ್ಳಿಯ ಶ್ರೀ ಮಾರುತಿ ವಿದ್ಯಾ ಕೇಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಿನ್ನೆ ಹಮ್ಮಿಕೊಳ್ಳಲಾಗಿತ್ತು
ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯೋಪಾಧ್ಯಾಯರಾದ ಬಿ ರುದ್ರಯ್ಯ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಾಣಿಗೆಗೆ ನಾಟಕಗಳು ಸಹಾಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಪಠ್ಯ ಆಧಾರಿತ ನಾಟಕಗಳನ್ನು ಮಾಡಿಸುವುದರಿಂದ ವಿದ್ಯಾರ್ಥಿಗಳಲ್ಲಿ ಮನೋ ಧೈರ್ಯ ಬೆಳೆಯುತ್ತದೆ ಎಂದು ಹೇಳಿದರು.
ನಮ್ಮ ಸಂಸ್ಕೃತಿಯನ್ನು ಉಳಿಸಿ ಮತ್ತು ಬೆಳೆಸುವ ಶಕ್ತಿ ವಿದ್ಯಾರ್ಥಿಗಳಲ್ಲಿ ಇದೆ ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿಗಳಿಗೆ ನಾಟಕಗಳನ್ನು ಪರಿಚಯಿಸುವುದರಿಂದ ಅವರ ಪ್ರತಿಭೆ ಹೊರಹೊಮ್ಮುತ್ತದೆ ಎಂದು. ಗ್ರಂಥ ಪಾಲಕ ರಾದ ಸುಂಕಪ್ಪ ಹೇಳಿದರು ವಿದ್ಯಾರ್ಥಿಗಳು ನಾಟಕಗಳಲ್ಲಿ ಅಭಿನಯಿಸುತ್ತಿದ್ದಾರೆ ಎಂದರೆ ಅವರು ಸಮಾಜವನ್ನು ಅರ್ಥಮಾಡಿಕೊಳ್ಳುವ ಮತ್ತು ಆಲೋಚನಾ ಮನೋಭಾವವನ್ನು ಬೆಳೆಸಿಕೊಳ್ಳುತ್ತಿದ್ದಾರೆ ಎಂದು ಅರ್ಥ ಎಂಬುದಾಗಿ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!