ಉದಯವಾಹಿನಿ, ನವದೆಹಲಿ: ಕೇಂದ್ರ ಸರ್ಕಾರವು ಅಭೂತಪೂರ್ವ ಸಾಧನೆ ಮಾಡುವ ಮೂಲಕ ಭಾರತದ ಸುವರ್ಣ ಅವಧಿಗೆ ಹೊಸ ಶಕ್ತಿ ನೀಡುತ್ತಿದೆ. ಇಂದು ದೇಶದ ಪ್ರಮುಖ ನಿರ್ಧಾರಗಳು ಮತ್ತು ನೀತಿಗಳನ್ನು ಅಸಾಧಾರಣ ವೇಗದಲ್ಲಿ ಜಾರಿಗೆ ತರುವುದನ್ನು ನಾವು ನೋಡುತ್ತಿದ್ದೇವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್ಡಿಎ ಸರ್ಕಾರವನ್ನು ಕೊಂಡಾಡಿದ್ದಾರೆ.
ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನ ಹಿನ್ನಲೆಯಲ್ಲಿ ಇಂದಿನಿಂದ ಆರಂಭವಾದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ 40 ನಿಮಿಷಗಳ ಭಾಷಣದಲ್ಲಿ ಹಲವಾರು ವಿಷಯಗಳನ್ನು ಪ್ರಸ್ತಾಪಿಸಿದರು.

ಪ್ರಮುಖವಾಗಿ ಮಹಿಳೆಯರ ಸಬಲೀಕರಣ, ಯುವಕರಿಗೆ ಉದ್ಯೋಗಾವಕಾಶ, ಆಯುಶಾನ್ ಭಾರತ್ ಯೋಜನೆಯಡಿ 70 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಆರೋಗ್ಯ ವಿಮೆ, ಮಧ್ಯಮ ವರ್ಗದವರಿಗೆ ಮನೆ ಹೊಂದುವ ಕನಸು ನನಸು, ಬುಡಕಟ್ಟು ಜನಾಂಗದವರಿಗೆ ವಿಶೇಷ ಯೋಜನೆ ಸೇರಿದಂತೆ ಹತ್ತು ಹಲವು ವಿಷಯಗಳನ್ನು ಪ್ರಸ್ತಾಪಿಸಿದರು.
ತಮ ಭಾಷಣದ ಪ್ರಾರಂಭದಲ್ಲಿ ಸಂವಿಧಾನವನ್ನು ಅಂಗೀಕರಿಸಿ 75 ವರ್ಷಗಳನ್ನು ಪೂರೈಸಿದ ಬಗ್ಗೆ ಪ್ರಸ್ತಾಪಿಸಿ ಸಂವಿಧಾನಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಕರುಡು ಸಮಿತಿಯ ಸದಸ್ಯರನ್ನು ಸರಿಸಿದರು.
ಇದೇ ವೇಳೆ ಮೌನಿ ಅಮಾವಾಸ್ಯೆಯ ದಿನದಂದು ಪ್ರಯಾಗ್ರಾಜ್ನಲ್ಲಿ ಮಹಾಕುಂಭದ ವೇಳೆ ನಡೆದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿ, ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.

Leave a Reply

Your email address will not be published. Required fields are marked *

error: Content is protected !!