ಉದಯವಾಹಿನಿ, ಬೆಂಗಳೂರು: ಮಧ್ಯಮ ವರ್ಗದವರು , ವೇತನದಾರರಿಗೆ ಸಿಹಿ ಸುದ್ದಿಯನ್ನು ಘೋಷಣೆ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 12 ಲಕ್ಷದವರೆಗೆ ಆದಾಯ ಇರುವವರಿಗೆ ತೆರಿಗೆ ವಿನಾಯಿತಿಯನ್ನು ಘೋಷಣೆ ಮಾಡಿದ್ದಾರೆ. ಇದರಿಂದಾಗಿ ವಾರ್ಷಿಕ 12 ಲಕ್ಷ ಆದಾಯ ಹೊಂದಿರುವವರು ಇನ್ನು ಮುಂದೆ ತೆರಿಗೆಯಿಂದ ವಿನಾಯ್ತಿ ನೀಡಲಾಗಿದೆ. ಜೊತೆಗೆ ಹಿರಿಯ ನಾಗರಿಕರಿಗೆ 50 ಸಾವಿರದಿಂದ 1 ಲಕ್ಷದವರೆಗೂ ತೆರಿಗೆ ವಿನಾಯ್ತಿಯನ್ನು ನೀಡಲಾಗಿದೆ.
ಹೊಸ ತೆರಿಗೆ ಪದ್ದತಿಯಲ್ಲಿ ವಾರ್ಷಿಕ 12 ಲಕ್ಷದವರೆಗೆ ಆದಾಯ ಗಳಿಸುವವರು ಯಾವುದೇ ತೆರಿಗೆಯನ್ನು ಪಾವತಿಸಬೇಕಿಲ್ಲ. ಇದಕ್ಕೆ 75 ಸಾವಿರ ರೂ.ಗಳ ಪ್ರಾಮಾಣಿಕ ಕಡಿತವನ್ನು ಸೇರಿಸಿದರೆ ವಾರ್ಷಿಕ 12 ಲಕ್ಷದ 75 ಸಾವಿರದವರೆಗೂ ಆದಾಯ ಹೊಂದಿರುವವರು ತೆರಿಗೆಯಿಂದ ವಿನಾಯಿತಿ ಪಡೆಯಲಿದ್ದಾರೆ.ಲೋಕಸಭೆಯಲ್ಲಿ ಪ್ರಸಕ್ತ 2025-26ನೇ ಸಾಲಿನ ಬಜೆಟ್‌ ಮಂಡಿಸಿದ ಅವರು, ದೇಶದ ಜನತೆಯ ಬೇಡಿಕೆಯಂತೆ ತೆರಿಗೆ ವಿನಾಯ್ತಿ ನೀಡುವ ಮೂಲಕ ಮಧ್ಯಮ ವರ್ಗದವರು ತೆರಿಗೆದಾರರು, ವೇತನದಾರರ ಮೊಗದಲ್ಲಿ ಮಂದಹಾಸ ಮೂಡಿಸಿದ್ದಾರೆ.
ಸಾಮಾನ್ಯವಾಗಿ ಪ್ರತಿ ಬಾರಿ ಬಜೆಟ್‌ ಮಂಡನೆ ವೇಳೆ ತೆರಿಗೆ ವಿನಾಯ್ತಿ ನೀಡಬೇಕೆಂಬುದು ಬಹುತೇಕರ ಬೇಡಿಕೆಯಾಗಿರುತ್ತಿತ್ತು. ಈ ಬಾರಿ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಹತ್ತು ಲಕ್ಷದವರೆಗೂ ತೆರಿಗೆ ವಿನಾಯ್ತಿಯನ್ನು ನೀಡಬಹುದೆಂದು ಅಂದಾಜಿಸಲಾಗಿತ್ತು.ಎಲ್ಲರ ನಿರೀಕ್ಷೆಯನ್ನು ಹುಸಿಗೊಳಿಸಿರುವ ನಿರ್ಮಲಾ ಸೀತರಾಮನ್‌ ಅವರು 12 ಲಕ್ಷದವರೆಗೆ ತೆರಿಗೆ ವಿನಾಯ್ತಿಯನ್ನು ಘೋಷಣೆ ಮಾಡಿದ್ದಾರೆ.
ತೆರಿಗೆದಾರರು 0-4=0, 4 ಲಕ್ಷದಿಂದ 8 ಲಕ್ಷದವರೆಗೆ ಶೇ.5ರಷ್ಟು, 8 ಲಕ್ಷದಿಂದ 11 ಲಕ್ಷದವರೆಗೆ ಶೇ.10ರಷ್ಟು, 12 ಲಕ್ಷದಿಂದ 15 ಲಕ್ಷದವರೆಗೆ ಶೇ.15, 15 ಲಕ್ಷದಿಂದ 20 ಲಕ್ಷದವರೆಗೆ ಶೇ.20ರಷ್ಟು, 20ರಿಂದ 24 ಲಕ್ಷದವರೆಗೆ ಶೇ.25ರವರೆಗೆ ಹಾಗೂ 24 ಲಕ್ಷ ಮೇಲ್ಪಟ್ಟ ಆದಾಯ ಹೊಂದಿರುವವರಿಗೆ ಶೇ.30ರಷ್ಟು ತೆರಿಗೆ ವಿಧಿಸಲಾಗುತ್ತದೆ.

Leave a Reply

Your email address will not be published. Required fields are marked *

error: Content is protected !!