ಉದಯವಾಹಿನಿ, ಬೆಂಗಳೂರು: ಭಿನ್ನ ಮತೀಯರ ವಿರೋಧವನ್ನು ಲೆಕ್ಕಿಸದೆ, ಕರ್ನಾಟಕದಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲು ಒಲವು ತೋರದ ಕೇಂದ್ರ ಬಿಜೆಪಿ ವರಿಷ್ಠರು, ಹಾಲಿ ಅಧ್ಯಕ್ಷರಾಗಿರುವ ಬಿ.ವೈ ವಿಜಯೇಂದ್ರ ಅವರನ್ನೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಸಲು ಮುಂದಾಗಿದ್ದಾರೆ.
ಬಿಜೆಪಿಯ ಇತಿಹಾಸದಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಣಾಹಣಿ ನಡೆದ ಉದಾಹರಣೆ ಇಲ್ಲ. ಹೀಗಾಗಿ ಈ ಸಂಪ್ರದಾಯವನ್ನು ಮುರಿಯದೆ ಇರಲು ಬಿಜೆಪಿ ನಿರ್ಧಾರ ಮಾಡಿದೆ.ಬಿಜೆಪಿಯ ಉನ್ನತ ನಾಯಕರು ಮತಪತ್ರದ ಮೂಲಕ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಒತ್ತಾಯಿಸಿದ್ದಾರೆ.
ಬಿ.ವೈ. ವಿಜಯೇಂದ್ರ ವಿರುದ್ಧ ಸಮರ್ಥ ನಾಯಕತ್ವ ಅಭ್ಯರ್ಥಿ ಕಣಕ್ಕಿಳಿಸಲು ಬಿಜೆಪಿಯಲ್ಲಿ ಚರ್ಚಿಸಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರಿರುವ ಬಣದಲ್ಲಿ ಮಹತ್ವದ ಚರ್ಚೆಗಳು ಆಗಿವೆ.
ಹೀಗಾಗಿ ಕರ್ನಾಟಕದಲ್ಲಿ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಸಾಧ್ಯತೆಗಳು ದಿನದಂದ ದಿನಕ್ಕೆ ಕ್ಷೀಣಿಸುತ್ತಿದ್ದು, ಮುಂದಿನ ಮೂರು ವರ್ಷಗಳ ಅವಧಿಗೆ ಹಾಲಿ ಅಧ್ಯಕ್ಷರಾಗಿರುವ ಬಿ.ವೈ ವಿಜಯೇಂದ್ರ ಅವರನ್ನೇ ಮುಂದುವರೆಸಲು ಕೇಂದ್ರ ವರಿಷ್ಟರು ಸಮತಿಸಿದ್ದಾರೆ. ಬಿಜೆಪಿ ಅಧ್ಯಕ್ಷರ ಬದಲಾವಣೆ ಕೂಗಿಗೆ ವರಿಷ್ಠರು ತಡೆ ಹಾಕಿದ್ದಾರೆ ಎಂದೇ ಹೇಳಲಾಗುತ್ತಿದೆ.ಸರ್ವಸಮತಿಯೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಒಲವು ತೋರಿರುವ ಬಿಜೆಪಿ ವರಿಷ್ಠರು, ಹಾಲಿ ರಾಜ್ಯಾ ಧ್ಯಕ್ಷ ವಿಜಯೇಂದ್ರ- ತಟಸ್ಥ ಬಣದ ನಡು ವಣ ವಿವಾದಕ್ಕೆ ತೆರೆ ಎಳೆಯಲು ರಾಜ್ಯ ಸಂಘಟನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಉತ್ತರ ಪ್ರಾಂತ್ಯದ ವ್ಯಕ್ತಿಯನ್ನು ನೇಮಕ ಮಾಡಲು ಒಲವು ತೋರಿದ್ದಾರೆ.
ಚುನಾವಣೆ ಇಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ನಡೆಯುವುದು ಬಹುತೇಕ ಖಾತ್ರಿಯಾಗಿದೆ.
ಅಲ್ಲ ದೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರನ್ನೇ ಮುಂದುವರಿಸುವ ಸಾಧ್ಯತೆ ಬಲವಾಗಿದೆ. ಈಗ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ವರಿಷ್ಠರು ಒಲವು ತೋರದೇ ಇರುವುದರಿಂದ ಯಾರು ರಾಜ್ಯಾಧ್ಯಕ್ಷ ಎಂಬ ಪ್ರಶ್ನೆ ಉದ್ಭವವಾಗಿತ್ತು. ಬಿಜೆಪಿಯ ಆಂತರಿಕ ಮೂಲಗಳ ಪ್ರಕಾರ ವಿಜಯೇಂದ್ರ ಅವರೇ ಈ ಸ್ಥಾನದಲ್ಲಿ ಮುಂದುವರಿಯುವ ಸಾಧ್ಯತೆ ಅಧಿಕವಾಗಿದೆ.
