ಉದಯವಾಹಿನಿ,ರಾಮನಗರ: ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ಆರಂಭಗೊಂಡ ನಂತ್ರ, ನಿರಂತರವಾಗಿ ಅಪಘಾತಗಳ ಸರಣಿ ಮುಂದುವರೆದಿದೆ. ಇಂದು ಮತ್ತೊಂದು ಕಾರು ಅಪಘಾತಗೊಂಡಿದ್ದು, ಓರ್ವ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.ರಾಮನಗರದ ಚನ್ನಪಟ್ಟಣ ತಾಲೂಕಿನ ಕೋಲೂರು ಗೇಟ್ ಬಳಿಯ ಚಾಮುಂಡೇಶ್ವರಿ ಆಸ್ಪತ್ರೆ ಮುಂಭಾಗದಲ್ಲಿ ವೇಗವಾಗಿ ಚಲಿಸುತ್ತಿದ್ದಂತ ಕಾರೊಂದಿ ಹೈವೇ ಡಿವೈಡರ್ ಗೆ ಡಿಕ್ಕಿಯಾಗಿದೆ. ಈ ಭೀಕರ ಅಪಘಾತದಲ್ಲಿ ಮದ್ದೂರು ಮೂಲದ ಚಾಲಕ ಮಂಜೇಶ್(28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ನೂ ಕಾರಿನಲ್ಲಿ ತೆರಳುತ್ತಿದ್ದಂತ ಇತರೆ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.ಅಂದಹಾಗೇ ಮೈಸೂರಿನಿಂದ ತೆರಳುತ್ತಿದ್ದಂತ ಟಾಟಾ ಇಂಡಿಕಾ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಗೆ ಡಿಕ್ಕಿಯಾಗಿ, ನಜ್ಜು ಗುಜ್ಜು ಆದ ಪರಿಣಾಮ, ಈ ಅಪಘಾತ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
