ಉದಯವಾಹಿನಿ, ಬೆಂಗಳೂರು: ಕೇಂದ್ರ ಸರ್ಕಾರ ದುರುದ್ದೇಶದಿಂದ ಕರ್ನಾಟಕ ರಾಜ್ಯಕ್ಕೆ ದ್ರೋಹ ಬಗೆಯುತ್ತಿದೆ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿ ಹಾಗೂ ಬಿಹಾರಕ್ಕೆ ಬರಪೂರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯದಿಂದ ಹೆಚ್ಚು ತೆರಿಗೆಯನ್ನು ಪಡೆದು ಕಡಿಮೆ ಅನುದಾನ ನೀಡಿ ರಾಜ್ಯದ ಅಭಿವೃದ್ಧಿಗೆ ಉದ್ದೇಶಪೂರ್ವಕವಾಗಿ ದ್ರೋಹವೆಸುಗುತ್ತಿದ್ದಾರೆ,
ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ರವರು ರಾಜಕೀಯ ಸೇಡಿನಿಂದ ಕರ್ನಾಟಕ ರಾಜ್ಯದ ಅಭಿವೃದ್ಧಿಯನ್ನು ಸಹಿಸದೆ ಕರ್ನಾಟಕಕ್ಕೆ ಉದ್ದೇಶಪೂರ್ವಕವಾಗಿ ದ್ರೋಹ ಬಗೆಯುತ್ತಿದ್ದಾರೆ ಇವರು ಮತ್ತು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಎಚ್.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಕರ್ನಾಟಕದ ಜನತೆಗೆ ಹಾಗೂ ಕನ್ನಡಿಗರಿಗೆ ದ್ರೋಹ ಬಗೆಯುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಆರೋಪಿಸಿದರು. ನಗರದ ರೇಸ್ ಕೋಸ್ ರಸ್ತೆಯ ಕಾಂಗ್ರೆಸ್ ಭವನದ ಮುಂಭಾಗವಿರುವ ಗಾಂಧಿ ಪ್ರತಿಮೆ ಮುಂಭಾಗ ಕೇಂದ್ರ ಸಚಿವೆ ನಿರ್ಮಲಾಸೀತಾರಾಮನ್ ವಿರುದ್ಧ ಪ್ರತಿಭಟನೆ ನಡೆಸಿ ಮಾತನಾಡಿದ ಅವರು ಮಧ್ಯಮ ವರ್ಗಕ್ಕೆ ೧೦ ರಿಂದ ೧೨ ಲಕ್ಷ ಆದಾಯ ಮಿತಿಯನ್ನು ಹೆಚ್ಚಿಸಲಾಗಿದೆ ಎಂದು ಅನುದಾನದಲ್ಲಿ ವಿಷಯದಲ್ಲಿ ಕರ್ನಾಟಕವನ್ನು ನಿರ್ಲಕ್ಷಿಸುತ್ತಿರುವುದು ಈಗಾಗಲೇ ಬಹಿರಂಗವಾಗಿದೆ.
ಕರ್ನಾಟಕ ಸರ್ಕಾರ ನೀಡುತ್ತಿರುವ ಯೋಜನೆಗಳಿಂದ ರಾಜ್ಯ ಸರ್ಕಾರದಲ್ಲಿ ಹಣವಿಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರವರು ಹೇಳಿಕೆಯನ್ನ ನೀಡಿದ್ದಾರೆ ಆದರೆ ಬಿಜೆಪಿಯ ಭ್ರಷ್ಟರು ಬೇರೆ ರಾಜ್ಯಗಳಲ್ಲಿ ಚುನಾವಣೆ ಲಾಭಕ್ಕೋಸ್ಕರ ಕರ್ನಾಟಕದ ಕಾಂಗ್ರೆಸ್ ಪಕ್ಷ ನೀಡಿರುವ ಯೋಜನೆಗಳನ್ನೇ ಘೋಷಿಸುತ್ತಿದ್ದಾರೆ ಹಾಗಾದರೆ ನಿರ್ಮಲಾ ಸೀತಾರಾಮನ್ ರವರಿಗೆ ರಾಜಕೀಯದ ಪ್ರಜ್ಞೆಯೇ ಇಲ್ಲ ಇವರು ಅರ್ಥ ಸಚಿವರಾಗಿ ಮುಂದುವರೆಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದರು.
