ಉದಯವಾಹಿನಿ, ಬಸವಕಲ್ಯಾಣ : ತಾಲ್ಲೂಕಿನ ರಾಜೇಶ್ವರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಪಲ್ಟಿಯಾದ ಕಾರಿನಲ್ಲಿ ₹1.18 ಕೋಟಿ ಮೌಲ್ಯದ 118 ಕೆ.ಜಿ ಗಾಂಜಾ ಪತ್ತೆಯಾಗಿದೆ.
ಕಾರು ತೆಲಂಗಾಣದಿಂದ ಮಹಾರಾಷ್ಟ್ರದ ಕಡೆಗೆ ಹೋಗುತ್ತಿತ್ತು.
ಹೆದ್ದಾರಿಯಲ್ಲಿನ ಸೇತುವೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಆಗ ಅದರಲ್ಲಿನ ಗಾಂಜಾದ ಪೊಟ್ಟಣಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಇದನ್ನು ಕಂಡ ಗ್ರಾಮಸ್ಥರು, ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅದರಲ್ಲಿದ್ದ ಇಬ್ಬರನ್ನು ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
