ಉದಯವಾಹಿನಿ,ಯಾದಗಿರಿ: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು,ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ, ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ.

ಕರ್ನಾಟಕದ ಅಧಿನಿಯಮಗಳು: ಕರ್ನಾಟಕದ ಮಿತಿಮೀರಿದ ಬಡ್ಡಿ ವಿಧಿಸುವಿಕೆ ನಿಷೇಧ ಕಾಯಿದೆ- ೨೦೦೪ ಪ್ರಕಾರ ಭದ್ರತಾ ಸಾಲಗಳಿಗೆ ರ‍್ಷಕ್ಕೆ ಶೇ.೧೪ ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ಗರಿಷ್ಠ ಶೇ.೧೬ ಗರಿಷ್ಠ ಬಡ್ಡಿ ದರವನ್ನು ಲೇವಾದೇವಿದಾರರಿಗೆ ನಿಗದಿಪಡಿಸಲಾಗಿದೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅನುಸರಿಸಬೇಕಾದ ಕ್ರಮಗಳು: ಮೈಕ್ರೋ ಫೈನಾನ್ಸ್ ಇನ್‌ಸ್ಟಿಟ್ಯೂಷನ್ (ಎಂಎಫ್ಐ) , ಮನಿ ಲೆಂಡಿಂಗ್ ಏಜೆನ್ಸಿ ಅಥವಾ ಸಂಸ್ಥೆಯಿಂದ ನೀಡುವ ಎಲ್ಲಾ ಸಾಲಗಳ ಮಂಜೂರಾತಿ, ವಿತರಣೆಯ ಪ್ರಕ್ರಿಯೆಯಲ್ಲಿ ಈ ಅಂಶಗಳನ್ನು ಅನುಸರಿಸಬೇಕು:
* ಸಾಲಗಾರನಿಗೆ ಸಾಲದ ನಿಯಮಗಳ ಬಗ್ಗೆ ಸ್ಥಳೀಯ ಭಾಷೆಯಲ್ಲಿ ಅಥವಾ ಆತನಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಬೇಕು.
* ಸಾಲದ ಷರತ್ತುಗಳ ಬಗ್ಗೆ ಮಾಹಿತಿ ನೀಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡಬೇಕು.
* ಯಾವ ದಾಖಲೆಗಳನ್ನು ನೀಡುವ ಅವಶ್ಯಕತೆ ಇದೆ ಎನ್ನುವ ಸೂಕ್ತ ಮಾಹಿತಿ ನೀಡಬೇಕು.
* ನಗದು ಪುಸ್ತಕ, ಲೆಡ್ಜರ್ ಮತ್ತು ಇತರ ದಾಖಲೆಗಳನ್ನು ಸರ‍್ಪಕವಾಗಿ ನರ‍್ವಹಿಸಬೇಕು.

*ಸಾಲ ನೀಡಿದ ದಿನಾಂಕದಿಂದ ಏಳು ದಿನಗಳ ಒಳಗೆ ಸಾಲಗಾರನಿಗೆ ನಿಗದಿತ ನಮೂನೆಯಲ್ಲಿ ಸಾಲದ ಮೊತ್ತ ,ನೀಡಿದ ದಿನಾಂಕ ಮತ್ತು ಅವಧಿಯ ಮುಕ್ತಾಯ, ಸಂಸ್ಥೆಯ ಕರ‍್ಯನರ‍್ವಾಹಕರ ಹೆಸರು ಮತ್ತು ವಿಳಾಸ, ನಿಯಮಾನುಸಾರ ವಿಧಿಸಲಾಗುವ ಬಡ್ಡಿದರ ಸ್ಪಷ್ಟವಾಗಿರುವ ಲಿಖಿತ ದಾಖಲೆಯನ್ನು ತಲುಪಿಸಬೇಕು.  ಸಾಲಗಾರನು ಮಾಡುವ ಪಾವತಿಗೆ ಪ್ರತಿಯಾಗಿ ಸಹಿ ಮಾಡಿದ ರಶೀದಿ ನೀಡಬೇಕು.
* ಸಾಲಗಾರನ ಲಿಖಿತ ಬೇಡಿಕೆಯ ಮೇರೆಗೆ ಸಾಲಕ್ಕೆ ಸಂಬಂಧಿಸಿದ ಯಾವುದೇ ದಾಖಲೆಯ ನಕಲನ್ನು ನೀಡಬೇಕು.  ಸಾಲಗಾರರಿಂದ ಪಡೆದ ಭದ್ರತೆಯನ್ನು ಸ್ಪಷ್ಟವಾಗಿ ತಿಳಿಸಬೇಕು. ಜನಸಾಮಾನ್ಯರು ಈ ವಿಧಾನಗಳ ಬಗ್ಗೆ ತಿಳುವಳಿಕೆ ಹೊಂದಿರಬೇಕು. ತಮ್ಮ ಅಧಿಕೃತ ಹಕ್ಕುಗಳು,ಬಾಧ್ಯತೆಗಳ ಬಗ್ಗೆ ಖಚಿತ ಪಡಿಸಿಕೊಂಡ ನಂತರ ಸಾಲ ತೆಗೆದುಕೊಳ್ಳಬೇಕು.

ಸಹಾಯವಾಣಿ: ಬಡಜನರ ಅವಶ್ಯಕತೆಯನ್ನು ಬಂಡವಾಳ ಮಾಡಿಕೊಳ್ಳುವ ಕೆಲವು ವ್ಯಕ್ತಿಗಳು,ಅನಧಿಕೃತ ಲೇವಾದೇವಿದಾರರು ಜನರ ತರ‍್ತು ಅವಶ್ಯಕತೆಗೆ ಹಣ ನೀಡಿ, ಹೆಚ್ಚು ಬಡ್ಡಿ ವಿಧಿಸಿ ಶೋಷಣೆ ಮಾಡುತ್ತಾರೆ. ಅಂತಹ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಸಾರ್ವಜನಿಕರು  ಸಹಾಯವಾಣಿ ಸಂಖ್ಯೆಗಳಿಗೆ ದೂರು ನೀಡಬಹುದು. ಸೂಕ್ಷ್ಮ ಹಣಕಾಸು ಸಂಸ್ಥೆ ,ಮನಿ ಲೆಂಡಿಂಗ್ ಸಂಸ್ಥೆಗಳ ನಿಯಮ ಉಲ್ಲಂಘನೆಗಳ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್‌ ಸಹಾಯವಾಣಿ ಸಂಖ್ಯೆ ೧೪೪೪೮ ಗೆ ಮಾಹಿತಿ ನೀಡಬಹುದು. ರಾಜ್ಯ ಸರ್ಕಾರವು ಮೈಕ್ರೋ ಫೈನಾನ್ಸ್‌ ಸಾಲಗಾರರಿಗೆ ಎಲ್ಲಾ ರೀತಿಯ ಕಾನೂನು ರಕ್ಷಣೆ ನೀಡಲು ಕ್ರಮವಹಿಸಿದೆ ನೊಂದ ವ್ಯಕ್ತಿಗಳು ರಾಜ್ಯದ ಏಕೀಕೃತ ಸಹಾಯವಾಣಿ ಸಂಖ್ಯೆ: ೧೧೨ ಅಥವಾ ೧೯೦೨ ಸಂಪರ್ಕಿಸ ಬಹುದು.

ಡಾ.ಶಾಲಿನಿ ರಜನೀಶ್ ಮುಖ್ಯ ಕಾರ್ಯದರ್ಶಿ ಕರ್ನಾಟಕ ಸರ್ಕಾರ

 

      

 

 

Leave a Reply

Your email address will not be published. Required fields are marked *

error: Content is protected !!