ಉದಯವಾಹಿನಿ, ಇಸ್ಲಮಾಬಾದ್‌: ಕಾಶ್ಮೀರ ಸೇರಿದಂತೆ ಎಲ್ಲ ಸಮಸ್ಯೆಗಳನ್ನು ಭಾರತದೊಂದಿಗೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಪಾಕಿಸ್ತಾನ ಬಯಸಿದೆ ಎಂದು ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ಹೇಳಿದ್ದಾರೆ. ಕಾಶೀರಿಗಳಿಗೆ ಬೆಂಬಲವನ್ನು ತೋರಿಸಲು ಪಾಕಿಸ್ತಾನದ ವಾರ್ಷಿಕ ಕಾರ್ಯಕ್ರಮವಾದ ಕಾಶೀರ ಒಗ್ಗಟ್ಟಿನ ದಿನ ದಂದು ಮುಜಫರಾಬಾದ್‌ನಲ್ಲಿ ಪಾಕ್‌ ಆಕ್ರಮಿತ ಕಾಶೀರ (ಪಿಒಕೆ) ಅಸೆಂಬ್ಲಿಯ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಷರೀಫ್‌ ಅವರು ಈ ಹೇಳಿಕೆ ನೀಡಿದ್ದಾರೆ.
ಕಾಶೀರ ಸೇರಿದಂತೆ ಎಲ್ಲ ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕೆಂದು ನಾವು ಬಯಸುತ್ತೇವೆ ಎಂದು ಅವರು ಹೇಳಿದ್ದಾರೆ.ಭಾರತವು ಆಗಸ್ಟ್‌ 5, 2019 ರ ಚಿಂತನೆಯಿಂದ ಹೊರಬರಬೇಕು ಮತ್ತು ವಿಶ್ವಸಂಸ್ಥೆಗೆ ನೀಡಿದ ಭರವಸೆಗಳನ್ನು ಈಡೇರಿಸಬೇಕು ಮತ್ತು ಸಂವಾದವನ್ನು ಪ್ರಾರಂಭಿಸಬೇಕು ಎಂದು ಷರೀಫ್‌ ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ 370 ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಉಲ್ಲೇಖಿಸಿ ಅವರು ಈ ಹೇಳಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!