ಉದಯವಾಹಿನಿ, ಬೆಂಗಳೂರು: ನಗರದಲ್ಲಿ ಇಂದಿನಿಂದ ಆರಂಭವಾಗಿರುವ ೧೫ನೇ ಆವೃತ್ತಿಯ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ ಹಿನ್ನೆಲೆಯಲ್ಲಿ ಮೊದಲ ದಿನವೇ ಬೆಂಗಳೂರಿಗರಿಗೆ ಸಂಚಾರ ದಟ್ಟಣೆಯ ಬಿಸಿ ತಟ್ಟಿದೆ. ಏರ್ ಶೋ ನಡೆಯುವ ಸ್ಥಳದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು,ಬೆಳಗ್ಗೆಯಿಂದಲೇ ವಾಹನ ಸವಾರರು ಪರದಾಡುವಂತಾಗಿತ್ತು. ಕಿಲೋಮೀಟರ್‌ಗಟ್ಟಲೇ ವಾಹನಗಳು ನಿಂತ ಹಿನ್ನೆಲೆಯಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಏರ್ ಶೋ ಉದ್ಘಾಟನಾ ಕಾರ್ಯಕ್ರಮದ ಸ್ಟಾಲ್‌ಗಳಿಗೆ ಬರುವ ಗಣ್ಯರಿಗೂ ಟ್ರಾಫಿಕ್ ಬಿಸಿ ತಟ್ಟಿದೆ. ಕಳೆದ ಎರಡು ಗಂಟೆಯಿಂದ ವಾಹನಗಳು ನಿಧಾನಗತಿಯಲ್ಲಿ ಸಂಚರಿಸುತ್ತಿವೆ.

ಸಂಚಾರ ಮಾರ್ಪಾಡು: ಏರ್ ಶೋ ಹಿನ್ನೆಲೆಯಲ್ಲಿ ೫ ದಿನಗಳ ಕಾಲ ಏರ್‌ಪೋರ್ಟ್ ರಸ್ತೆಯ ಸವಾರರಿಗೆ ಟ್ರಾಫಿಕ್ ಬಿಸಿ ತಟ್ಟುವ ಸಾಧ್ಯತೆ ಇದೆ. ವಿದೇಶಿ ಗಣ್ಯರು ಆಗಮಿಸುವ ಕಾರಣ ಎಲಿವೇಟೆಡ್ ರಸ್ತೆಯ ಸಂಚಾರವನ್ನು ಕೆಲ ಕಾಲ ಬಂದ್ ಮಾಡಲಾಗುತ್ತೆ. ಸರ್ವೀಸ್ ರಸ್ತೆಯಲ್ಲೇ ಸಂಚಾರ ಮಾಡಬೇಕಿರುವ ಕಾರಣ ಆ ಭಾಗದ ವಾಹನ ಸವಾರರು ೫ ದಿನಗಳ ಕಾಲ ಇದೇ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಇನ್ನೂ, ಏರ್ ಪೋರ್ಟ್ ರಸ್ತೆ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಿ ಸಂಚಾರಿ ಪೊಲೀಸರು ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!