ಉದಯವಾಹಿನಿ, ನವದೆಹಲಿ: ಆಪ್ ಸರ್ಕಾರ ಇರುವ ಪಂಜಾಬ್ನಲ್ಲಿ 30 ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿ ಹೊರಬೀಳುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಪಕ್ಷದ ವರಿಷ್ಠ ಅರವಿಂದ್ ಕೇಜ್ರಿವಾಲ್ ಅವರು ಶಾಸಕರ ಸಭೆ ಕರೆದಿದ್ದಾರೆ.ನಾಳೆ ನಡೆಯಲಿರುವ ಸಭೆಯಲ್ಲಿ ಪಕ್ಷ ತೊರೆಯದಂತೆ ಶಾಸಕರ ಮನವೊಲಿಸುವ ಕಾರ್ಯವನ್ನು ಕೇಜ್ರಿ ಮಾಡಲಿದ್ದಾರೆ ಎಂದು ವರದಿಯಾಗಿದೆ.
27 ವರ್ಷಗಳ ನಂತರ ಬಿಜೆಪಿ ಅಧಿಕಾರಕ್ಕೆ ಬಂದ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಪಂಜಾಬ್ ವಿರೋಧ ಪಕ್ಷದ ನಾಯಕ ಪರತಾಪ್ ಸಿಂಗ್ ಬಾಜ್ವಾ ಅವರು ರಾಜ್ಯದ 30 ಎಎಪಿ ಶಾಸಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದ್ದರು.
ಪಂಜಾಬ್ನಲ್ಲಿ ಎಎಪಿಯೊಳಗೆ ಒಡಕು ಮತ್ತು ರಾಜ್ಯ ಸರ್ಕಾರದಲ್ಲಿ ಪುನಾರಚನೆಯಾಗುವ ಸಾಧ್ಯತೆಯಿದೆ ಎಂದು ವಿರೋಧ ಪಕ್ಷದ ನಾಯಕರು ಭವಿಷ್ಯ ನುಡಿದಿದ್ದಾರೆ. ಪಂಜಾಬ್ನಲ್ಲಿ 2022 ರ ವಿಧಾನಸಭಾ ಚುನಾವಣೆಯಲ್ಲಿ, 117 ಸ್ಥಾನಗಳಲ್ಲಿ 92 ಸ್ಥಾನಗಳನ್ನು ಗೆಲ್ಲುವ ಮೂಲಕ ಎಎಪಿ ಕಾಂಗ್ರೆಸ್ನಿಂದ ಅಧಿಕಾರವನ್ನು ಕಸಿದುಕೊಂಡಿತು. ಕಾಂಗ್ರೆಸ್ 18 ಸ್ಥಾನಗಳನ್ನು ಗೆದ್ದಿದ್ದರೆ, ಶಿರೋಮಣಿ ಅಕಾಲಿದಳ ಮೂರು ಶಾಸಕರನ್ನು ಹೊಂದಿದೆ.

Leave a Reply

Your email address will not be published. Required fields are marked *

error: Content is protected !!