ಉದಯವಾಹಿನಿ, ವಯನಾಡ್: ಕೇರಳದ ವಯನಾಡ್‌ನಲ್ಲಿ ಕಾಡಾನೆ ದಾಳಿಯಲ್ಲಿ 27 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಜುಲೈನಲ್ಲಿ ಭೂಕುಸಿತ ಸಂಭವಿಸಿ ಹಲವಾರು ಜೀವಗಳು ಬಲಿಯಾದ ಚೂರಲ್‌ಲ ಬಳಿಯ ಅಟ್ಟಮಲದಲ್ಲಿರುವ ಬುಡಕಟ್ಟು ಜನರು ವಾಸವಿರುವ ಪ್ರದೇಶದಲ್ಲಿ ಘಟನೆ ನಡೆದಿದೆ. ಬುಡಕಟ್ಟು ಸಮುದಾಯದ ಸದಸ್ಯ ಬಾಲಕೃಷ್ಣನ್ ಮೃತಪಟ್ಟ ವ್ಯಕ್ತಿ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ.
ಘಟನೆಯಿಂದ ಸ್ಥಳೀಯ ನಿವಾಸಿಗಳು ಆಕ್ರೋಶಿತರಾಗಿದ್ದು, ಕಾಡು ಪ್ರಾಣಿಗಳ ದಾಳಿಯಿಂದ ನಾಗರಿಕರನ್ನು ರಕ್ಷಿಸಲು ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.
