ಉದಯವಾಹಿನಿ, ಯಾದಗಿರಿ : ತಿಂಥಣಿಯ ಜಗದ್ಗುರು ಮೌನೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವ ಬುಧವಾರ ಸಂಜೆ ಸಂಭ್ರಮದಿಂದ ಲಕ್ಷಾಂತರ ಭಕ್ತರ ಮಧ್ಯೆ ಜರುಗಲಿದೆ.ರಥೋತ್ಸವ ಜರುಗಲಿರುವ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಸುರಪುರ ಅರಸು ಸಂಸ್ಥಾನದ ರಾಜರು, ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತದ ಅಧಿಕಾರಿಗಳು, ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ಜಿಲ್ಲೆ ಹಾಗೂ ತಾಲ್ಲೂಕುಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ತಿಂಥಣಿಗೆ ಪಾದಯಾತ್ರೆ, ವಾಹನಗಳ ಮೂಲಕ ಆಗಮಿಸುವ ನಿರೀಕ್ಷೆ ಇದೆ. ಈಗಾಗಲೇ ದೇವಸ್ಥಾನದ ಆವರಣದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ ಭಕ್ತರು ಟೆಂಟ್ ಹಾಕಿ ದಾಸೋಹ ಕಾರ್ಯಕ್ರಮ ನಡೆಸುತ್ತಿದ್ದಾರೆ.
‘ನೀರಿನ ಘಟಕ ಹಾಗೂ ಭಕ್ತರು ಸಂಚರಿಸುವ ಸ್ಥಳಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ತಿಂಥಣಿ ಗ್ರಾಮಕ್ಕೆ ನಿರಂತರ ಜ್ಯೋತಿ ಸೌಲಭ್ಯ ಇರುವುದರಿಂದ ವಿದ್ಯುತ ಕಡಿತವಾಗದಂತೆ ಮುನ್ನೆಚ್ಚರಿಕಾ ಕ್ರಮಕೈಗೊಳ್ಳಲಾಗಿದೆ’ ಎಂದು ಸುರಪುರದ ಜೆಸ್ಕಾಂ ಇಇ ರಾಜಶೇಖರ ತಿಳಿಸಿದರು.
‘ಭದ್ರತೆಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಸುರಪುರ ಡಿವೈಎಸ್‌ಪಿ ಜಾವೀದ್ ಇನಾಂದಾರ್ ತಿಳಿಸಿದ್ದಾರೆ.
ಟ್ರಾಫಿಕ್ ಸಮಸ್ಯೆ ಆಗದಂತೆ ಸರ್ಕಾರಿ ಪ್ರೌಢಶಾಲಾ ಆವರಣ, ಸುರಪುರ ಮಾರ್ಗವಾಗಿ ಬರುವ ವಾಹನಗಳಿಗೆ ಜಹಾಗೀರದಾರ ಜಮೀನಿನಲ್ಲಿ ಪಾರ್ಕಿಂಗ್ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದರು.
‘ಭಕ್ತರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ತುರ್ತು ಸೇವೆ, ವಿದ್ಯುತ್ ಬೆಳಕಿನ ವ್ಯವಸ್ಥೆ ಸೇರಿದಂತೆ ವಿವಿಧ ಸೌಕರ್ಯ ಕಲ್ಪಿಸಲಾಗಿದೆ’ ಎಂದು ಉಪ ತಹಶೀಲ್ದಾ‌ರ್ ರೇವಪ್ಪ ತೆಗ್ಗಿಮನಿ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!