ಉದಯವಾಹಿನಿ ಕುಶಾಲನಗರ, : -ವಿದ್ಯಾರ್ಥಿಗಳು ತಮ್ಮನ್ನು ಪರಿಸರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಭವಿಷ್ಯದಲ್ಲಿ ಪರಿಸರ ರಾಯಭಾರಿಗಳಾಗಿ ರೂಪುಗೊಳ್ಳಬೇಕು ಎಂದು ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಕರೆ ನೀಡಿದರು. ಕುಶಾಲನಗರ ತಾಲ್ಲೂಕಿನ ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ., ಜೆ.ಸಿ.ಬೋಸ್
ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನಾ ( ಎನ್.ಎಸ್.ಎಸ್.) ಹಾಗೂ ಸುಂಟಿಕೊಪ್ಪ ಜೆ.ಸಿ.ಐ.ಘಟಕದ ವತಿಯಿಂದ ‘ಪ್ಲಾಸ್ಟಿಕ್ ತ್ಯಾಜ್ಯದ ಸಮರ್ಪಕವಾದ ನಿರ್ವಹಣೆ ಪರಿಸರ ಮತ್ತು ಜೀವ- ಸಂಕುಲದ ಸಂರಕ್ಷಣೆ ‘ ಎಂಬ ಕೇಂದ್ರ ವಿಷಯದಡಿ ‘ವಿಶ್ವ ಪರಿಸರ ದಿನ’ದ ಅಂಗವಾಗಿ ಪ್ರೌಢಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ “ನಮ್ಮನಡೆ ಪರಿಸರದೆಡೆಗೆ” – “ಗೋ ಗ್ರೀನ್ ಅಭಿಯಾನ”ದ ಅಂಗವಾಗಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತಗೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ರಾಷ್ಟ್ರೀಯ ಹಸಿರು ಪಡೆಯ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ ನಾವು ಪಶ್ಚಿಮಘಟ್ಟದಲ್ಲಿನ ಜೀವ ವೈವಿಧ್ಯ, ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಸುಂದರ ಪ್ರಕೃತಿ ತಾಣವಾದ ಕೊಡಗಿನ ಅರಣ್ಯ, ಪರಿಸರ, ಜೀವ ವೈವಿಧ್ಯ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದರು.”ಪ್ಲಾಸ್ಟಿಕ್ ಮಾಲಿನ್ಯದಿಂದ ಪರಿಸರಕ್ಕೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ ಎನ್.ಎಸ್.ಸತೀಶ್,ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು. ಎಸ್.ಡಿ.ಎಂ.ಸಿ.ಅಧ್ಯಕ್ಷ ಎಸ್.ಎನ್.ಪುಟ್ಟಸ್ವಾಮಿ ಶಾಲಾವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಇಂದಿರಾ ರಮೇಶ್ ಮಾತನಾಡಿದರು ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ, ಸಂಪನ್ಮೂಲಶಿಕ್ಷಕರಾದ ಜಿ.ಶ್ರೀನಾಥ್, ಉ.ರಾ.ನಾಗೇಶ್, ಎಸ್.ಡಿ.ಎಂ.ಸಿ.ಸದಸ್ಯರಾದ ಜವರಯ್ಯ, ಎಂ.ರಂಗಸ್ವಾಮಿ, ಕೆ.ಎಸ್.ರಾಜಾಚಾರಿ, ಉಷಾ, ಶಿಕ್ಷಕರಾದ ಕೆ.ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಸ್ವಯಂ ಸೇವಾ ಸಂಘಟನೆಯ ಪ್ರಮುಖರಾದ ಸುನಂದಕುಮಾರ್, ಎಚ್.ಸಿ.ಗೋವಿಂದರಾಜ್,ಅರಣ್ಯ ರಕ್ಷಕ ಮಂಜೇಗೌಡ, ಇತರರು ಇದ್ದರು.
