ಉದಯವಾಹಿನಿ, ನವದೆಹಲಿ: ಕುಂಭಮೇಳಕ್ಕೆ ಹೊರಟಿದ್ದಾಗ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ 18 ಮಂದಿ ಮೃತಪಟ್ಟಿದ್ದು, ಸಾವನ್ನಪ್ಪಿದ ವರ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 10 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡ ವರಿಗೆ ತಲಾ 2.5 ಲಕ್ಷ ರೂ. ಪರಿಹಾರ ಘೋಷಿಸಿದೆ.
ಕುಂಭಮೇಳಕ್ಕೆ ಹೊರಟಿದ್ದಾಗ ದೆಹಲಿ ರೈಲು ನಿಲ್ದಾಣದಲ್ಲಿ ತಡರಾತ್ರಿ ನೂಕುನುಗ್ಗುಲು ಉಂಟಾಗಿ ಕಾಲ್ತುಳಿತದಲ್ಲಿ ಈವರೆಗೆ 18 ಜನ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಮೃತರಲ್ಲಿ 11 ಮಹಿಳೆಯರು ಹಾಗೂ ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಂಭಮೇಳಕ್ಕೆ ತೆರಳುವ ಭಕ್ತರಿಗೆ ದೆಹಲಿಯಿಂದ 2 ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿತ್ತು. ಆದರೆ ಈ ರೈಲುಗಳಿಗೂ ಮೊದಲು ಭುವನೇಶ್ವರಕ್ಕೆ ತೆರಳಬೇಕಿದ್ದ ರಾಜಧಾನಿ ಮತ್ತು ಸ್ವತಂತ್ರ ಸೇನಾನಿ ಎಕ್ಸೆಪ್ರೆಸ್ ರೈಲುಗಳು ತಡವಾಗಿ ನಿಲ್ದಾಣವನ್ನು ತಲುಪಿದವು. ಹೀಗಾಗಿ ರೈಲು ನಿಲ್ದಾಣದಲ್ಲಿ ಒಮೆಗೆ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗಿತ್ತು.
ಪ್ಲಾಟ್ಫಾರ್ಮ್ 14 ಮತ್ತು 15ಕ್ಕೆ ಪ್ರಯಾಗ್ರಾಜ್ಗೆ ಹೊರಟ ವಿಶೇಷ ರೈಲು ನಿಲ್ದಾಣಕ್ಕೆ ಬಂದಿದ್ದವು. ಈ ವೇಳೆ ಸಾವಿರಾರು ಜನರು ಏಕಾಏಕಿ ರೈಲಿಗೆ ನುಗ್ಗಿದ್ದರಿಂದ ರೈಲಿನ ಒಳಗು, ಹೊರಗೂ ಕಾಲ್ತುಳಿತ ಉಂಟಾಗಿದೆ. ಪರಿಣಾಮ 18 ಮಂದಿ ಸಾವನ್ನಪ್ಪಿ, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕೂಡಲೇ ರೈಲ್ವೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯ ಕೈಗೊಂಡು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿ ಪರಿಶೀಲಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.
