ಉದಯವಾಹಿನಿ, ಬೆಂಗಳೂರು: ರಾಜ್ಯ ಸರ್ಕಾರ ಹತ್ತು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಅಧಿಸೂಚನೆ ಹೊರಡಿಸಿದೆ. ಗೋವಿಂದ ರೆಡ್ಡಿ, ಐಎಎಸ್ (ಕೆಎನ್: 2013) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಸರ್ಕಾರದ ಜಂಟಿ ಕಾರ್ಯದರ್ಶಿ, ಮೂಲಸೌಕರ್ಯ ಅಭಿವೃದ್ಧಿ, ಬಂದರುಗಳು ಮತ್ತು ಒಳನಾಡಿನ ಜಲ ಸಾರಿಗೆ ಇಲಾಖೆ, ಬೆಂಗಳೂರು ಇಲ್ಲಿಗೆ ವರ್ಗಾಯಿಸಿದೆ.ಬೆಂಗಳೂರು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ನಿರ್ದೇಶಕ ದರ್ಶನ್ ಎಚ್.ವಿ.. ಐಎಎಸ್ (ಕೆಎನ್: 2016) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ (ಸೇವಾ ವಿಶ್ಲೇಷಣಾ ವಿಭಾಗ) ಆಗಿ ನೇಮಿಸಲಾಗಿದೆ.ಚಂದ್ರಶೇಖರ ನಾಯಕ ಎಲ್. ಅವರನ್ನು ಆ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ.ಮೈಸೂರು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಾಯಿತ್ರಿ ಕೆ.ಎಂ., ಐಎಎಸ್ (ಕೆಎನ್: 2016) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ರಾಷ್ಟ್ರೀಯ ಜೀವನೋಪಾಯ ಮಿಷನ್ (ಎನ್ಎಲ್‌ಎಂ) ಗೆ ನೇಮಿಸಲಾಗಿದೆ.
ಹಾವೇರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ್ ಶ್ರೀಧರ್, ಐಎಎಸ್ (ಕೆಎನ್: 2017) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರದ ಉಪ ಕಾರ್ಯದರ್ಶಿ, ಡಿಪಿಎಆರ್ (ಸೇವೆಗಳು), ಬೆಂಗಳೂರು ಇಲ್ಲಿಗೆ ನೇಮಿಸಿದೆ. ಉಪ ಕಾರ್ಯದರ್ಶಿ ಉಕೇಶ್ ಕುಮಾರ್ ಎಸ್., ಐಎಎಸ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಹುದ್ದೆಗಾಗಿ ಕಾಯುತ್ತಿರುವ ಪದ್ಮಾ ಬಸವಂತಪ್ಪ ಐಎಎಸ್ (ಕೆಎನ್: 2017) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ನಿರ್ದೇಶಕರು, ಸಾಮಾಜಿಕ ಲೆಕ್ಕಪರಿಶೋಧನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ. ಇಲ್ಲಿಗೆ ವರ್ಗಾಯಿಸಲಾಗಿದೆ.ಬೆಂಗಳೂರು ಡಿಪಿಎಆರ್ (ಸೇವೆಗಳು) ಸರ್ಕಾರದ ಉಪ ಕಾರ್ಯದರ್ಶಿ ಉಕೇಶ್ ಕುಮಾರ್ ಎಸ್.. ಐಎಎಸ್ (ಕೆಎನ್: 2018) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಜಿಲ್ಲಾ ಪಂಚಾಯತ್, ಮೈಸೂರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಬಳ್ಳಾರಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂ‌ರ್, ಐಎಎಸ್ (ಕೆಎನ್: 2019) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಬೆಂಗಳೂರಿನ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ನಿರ್ದೇಶಕರಾಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದಂತ ದರ್ಶನ್ ಎಚ್.ವಿ., ಐಎಎಸ್ ಅವರನ್ನು ವರ್ಗಾವಣೆ ಮಾಡಲಾಗಿದೆ. ರುಚಿ ಬಿಂದಾಲ್, ಐಎಎಸ್ (ಕೆಎನ್: 2020) ಅವರನ್ನು ಎಲೆಕ್ಟ್ರಾನಿಕ್ಸ್ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಬೆಂಗಳೂರು ಸರ್ಕಾರದ ಉಪ ಕಾರ್ಯದರ್ಶಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಹಾವೇರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಲಾಗಿದೆ. ಈ ಹುದ್ದೆಯಲ್ಲಿದ್ದಂತೆ ಅಕ್ಷಿ ಶ್ರೀಧರ್, ಐಎಎಸ್ ಅವರನ್ನು ವರ್ಗಾವಣೆ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!