ಉದಯವಾಹಿನಿ, ಬೆಂಗಳೂರು : ರಾಜ್ಯದಲ್ಲಿನಂದಿನಿ ಹಾಲಿನ ದರ ಏರಿಕೆ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸ್ಪಷನೆ ನೀಡಿದ್ದಾರೆಬಜೆಟ್ ನಂತರ ಕೆಎಂಎಫ್ ನಂದಿನಿ ಹಾಲಿನ ದರ ೫ ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ ಎಂಬ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದು ಸರ್ಕಾರ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.ಬಳ್ಳಾರಿಯಲ್ಲಿ ಮಾತನಾಡಿದ ಅವರು ಸಂಬಂಧಿತ ಇಲಾಖೆಗಳಿಂದ ಒತ್ತಡ ಇದ್ದರೂ, ಸರ್ಕಾರದ ಅಂತಿಮ ನಿರ್ಧಾರ ಕಾಯಬೇಕಿದೆ. ರೈತರಿಗೆ ಹೆಚ್ಚುವರಿ ಹಣ ಸಿಗುವಂತೆ ದರ ಹೆಚ್ಚಳದ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿಸಿದ್ದಾರೆ.ನಂದಿನಿ ಹಾಲಿನ ದರ ಹೆಚ್ಚಳ ಮಾಡುವಂತೆ ಒತ್ತಡ ಇದೆ. ಸಂಬಂಧಿಸಿದ ನಿಗಮಗಳ ಸಭೆ ಕರೆದು ಚರ್ಚೆ ಮಾಡಲಾಗಿದೆ. ೫ ರೂ. ಹೆಚ್ಚಳ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೆಚ್ಚಳ ಮಾಡಿದ ದರವನ್ನು ರೈತರಿಗೆ ನೀಡಬೇಕೆಂದು ಚರ್ಚಿಸಲಾಗಿದೆ. ಸಭೆಯಲ್ಲಿ ಚರ್ಚಿಸಿದ ವಿಷಯವನ್ನು ಸರ್ಕಾರಕ್ಕೆ ತಿಳಿಸಿದ್ದೇವೆ ಎಂದಿದ್ಧಾರೆ.ಪಶುಸಂಗೋಪನೆ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಂದ ದರ ಹೆಚ್ಚಳದ ಬಗ್ಗೆ ಒತ್ತಡ ಇದೆ. ಆದರೆ, ಸರ್ಕಾರದಿಂದ ಯಾವುದೇ ನಿರ್ಧಾರ ಹೊರಬಂದಿಲ್ಲ. ಹಾಲಿನ ದರ ಹೆಚ್ಚಳ ಬಗ್ಗೆ ಸರ್ಕಾರ ತೀರ್ಮಾನ ಮಾಡಿಲ್ಲ ಎಂದು ತಿಳಿಸಿದ್ದಾರೆ.ಹಾಲಿನ ದರ ಏರಿಕೆಗಾಗಿ ರಾಜ್ಯ ಸರ್ಕಾರದ ಮೇಲೆ ಹಾಲು ಒಕ್ಕೂಟಗಳು ಒತ್ತಡ ಹೇರುತ್ತಿದ್ದು, ಲೀಟರ್‍ಗೆ ೫ ರೂಪಾಯಿ ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿವೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿತ್ತು. ಕಳೆದ ತಿಂಗಳು ಪಶು ಸಂಗೋಪನಾ ಸಚಿವರು ಕೆಎಂಎಫ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಸಭೆಯಲ್ಲಿ ಹಾಲಿನ ದರ ಏರಿಕೆ ಮಾಡಬೇಕಾದ ಅನಿವಾರ್ಯತೆ ಕುರಿತು ಚರ್ಚೆಯಾಗಿತ್ತು.ಈ ವೇಳೆ ಹಾಲಿನ ದರ ಲೀಟರಿಗೆ ೫ ರೂಪಾಯಿ ಏರಿಸಬೇಕು ಎಂದು ಒಕ್ಕೂಟಗಳು ಪ್ರಸ್ತಾವನೆ ಸಲ್ಲಿಸಿದ್ದವು. ಸಂಗೋಪನೆಯ ಖರ್ಚು ವೆಚ್ಚಗಳ ಹೆಚ್ಚಳದಿಂದ ಬೆಲೆ ಏರಿಸಲೇ ಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಹೇಳಿದ್ದವು.ಕಳೆದ ವರ್ಷ ಡಿಸೆಂಬರ್‍ನಲ್ಲಿ ರೈತರು ಹಾಗೂ ಹಾಲು ಒಕ್ಕೂಟಗಳು ಪ್ರತಿ ಲೀಟರ್ ನಂದಿನಿ ಹಾಲಿನ ದರ ೫ ರೂಪಾಯಿ ಏರಿಕೆ ಮಾಡುವಂತೆ ಕೆಎಂಎಫ್‌ಗೆ ಮನವಿ ಮಾಡಿದ್ದವು.
