ಉದಯವಾಹಿನಿ, ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಬನಶಂಕರಿ ಸಾಮೂಹಿಕ ವಿವಾಹ ವೇದಿಕೆ ವತಿಯಿಂದ ೨೬ ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮಿಕೊಳ್ಳಲಾಗಿದೆ.
ಕನಕಪುರ ರಸ್ತೆಯಲ್ಲಿರುವ ಬನಶಂಕರಿ ದೇವಾಲಯದ ಆವರಣದಲ್ಲಿ ನಾಳೆ ನಡೆಯಲಿರುವ ಈ ವಿವಾಹ ಕಾರ್ಯಕ್ರಮದಲ್ಲಿ ೬೯ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ವೇದಿಕೆ ವ್ಯವಸ್ಥಾಪಕ ಹಾಗೂ ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ಎ.ಎಚ್.ಬಸವರಾಜ್ ತಿಳಿಸಿದ್ದಾರೆ.ವೃಕ್ಷ ಮಾತೆ ಸಾಲು ಮರದ ತಿಮಕ್ಕ, ಮುರಾರಿ ಸ್ವಾಮಿಗಳ ಮಹಾಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಕುಮಾರಸ್ವಾಮಿ ಶ್ರೀಗಳು ನವ ವಧು-ವರರಿಗೆ ಆರ್ಶಿವಚನ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರತಿ ಪಕ್ಷದ ನಾಯಕ ಹಾಗೂ ಮಾಜಿ ಡಿಸಿಎಂ ಆರ್.ಅಶೋಕ್ ವಹಿಸಲಿದ್ದು, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಜ್ಯೋತಿ ಬೆಳಗಿಸಲಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಅವರು ಪ್ರಮಾಣ ಪತ್ರ ವಿತರಣೆ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಂಸದರಾದ ಪಿ.ಸಿ.ಮೋಹನ್, ಡಾ.ಸಿ.ಎನ್. ಮಂಜುನಾಥ್, ಶಾಸಕರಾದ ರವಿ ಸುಬ್ರಮಣ್ಯ, ಸಿ.ಕೆ.ರಾಮಮೂರ್ತಿ, ಜಿ.ಡಿ.ಹರೀಶ್‌ಗೌಡ, ರಮೇಶ್ ರೆಡ್ಡಿ, ಮಾಜಿ ಸಚಿವರಾದ ಪಿ.ಜಿ.ಆರ್.ಸಿಂಧ್ಯಾ, ಕಟ್ಟಾ ಸುಬ್ರಮಣ್ಯ ನಾಯ್ಡು, ವಿಧಾನ ಪರಿಷತ್‌ನ ಮಾಜಿ ಸದಸ್ಯ ಟಿ.ಎ.ಶರವಣ, ಮಾಜಿ ಮೇಯರ್ ಡಿ.ವೆಂಕಟೇಶ್ ಮೂರ್ತಿ, ಜೆಡಿಎಸ್ ಮುಖಂಡ ರಮೇಶ್‌ಗೌಡ, ಚಿತ್ರ ನಟಿ ತಾರಾ ಅನುರಾಧ, ಚಿತ್ರನಟ ಶ್ರೀನಗರ ಕಿಟ್ಟಿ, ಬನಶಂಕರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಕೃಷ್ಣಪ್ಪ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!