ಉದಯವಾಹಿನಿ, ಹುಬ್ಬಳ್ಳಿ: ‘ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿಲ್ಲ. ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ನೀಡುವುದು ಒಂದೆರಡು ತಿಂಗಳು ವಿಳಂಬವಾಗಿರಬಹುದು. ಮುಂಬರುವ ದಿನಗಳಲ್ಲಿ ಎರಡೂ ತಿಂಗಳ ಹಣವನ್ನು ಒಟ್ಟಿಗೆ ಸೇರಿಸಿಕೊಡಬಹುದು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸರ್ಕಾರದ ಮಟ್ಟದಲ್ಲಿ ಹಣ ನೀಡುವುದು ವಿಳಂಬವಾಗುವುದು ಸಹಜ. ವಿಳಂಬವಾದರೂ ಹಣ ಕೊಡುವುದನ್ನು ನಿಲ್ಲಿಸಿಲ್ಲ’ ಎಂದು ತಿಳಿಸಿದರು. ‘ಮುಖ್ಯಮಂತ್ರಿ ರೇಸ್‌ನಲ್ಲಿ ಡಿ.ಕೆ. ಶಿವಕುಮಾರ್ ಮೊದಲಿನಿಂದಲೂ ಇದ್ದಾರೆ. ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ಕೆಪಿಸಿಸಿ ಅಧ್ಯಕ್ಷ ಸ್ನಾನಕ್ಕೆ ನಾನು ಆಕಾಂಕ್ಷಿ ಅಲ್ಲ. ಸಮಯ ಬಂದಾಗ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ’ ಎಂದರು.
ಕೆಪಿಸಿಸಿ ಅಧ್ಯಕ್ಷರನ್ನ ನೇಮಿಸುವ ಅಧಿಕಾರ ನಮಗಿಲ್ಲ.

ಅದನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ತಕ್ಷಣ ಆಗದೆ ಇರಬಹುದು, ಮುಂದೆಯಾದರೂ ಮಾಡುತ್ತಾರೆ. ಯಾವಾಗ ಮಾಡುತ್ತಾರೆ ಎನ್ನುವುದನ್ನು ಕಾದುನೋಡಬೇಕಾಗಿದೆ ಎಂದು ಹೇಳಿದರು.  ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಸಂಸ್ಥೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಹೇಳಲು ಸಾಧ್ಯವಿಲ್ಲ. ಅದನ್ನು ಸಾಬೀತುಪಡಿಸಲು ಆಗಲ್ಲ. ಸಾಕ್ಷಾಧಾರಗಳೂ ಇಲ್ಲ, ಸಿ.ಎಂ ಅವರ 14 ಸೈಟ್ ಗಳ ಬಗ್ಗೆನೇ ಹೆಚ್ಚಿನ ವಿಷಯ ಪ್ರಸ್ತಾಪ ಮಾಡ್ತಿರೋದೇ ರಾಜಕೀಯ ಇದೆ ರೀತಿ 2,000 ಸೈಟ್‌ಗಳು ಹಂಚಿಕೆ ಆಗಿವೆ, ಆ ಬಗ್ಗೆ ಯಾಕೆ ಚರ್ಚೆ ಆಗ್ತಿಲ್ಲ ಎಂದು ಪ್ರಶ್ನಿಸಿದರು.

Leave a Reply

Your email address will not be published. Required fields are marked *

error: Content is protected !!