ಉದಯವಾಹಿನಿ, ಹಾಸನ: ತಾಲ್ಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ನಾಲ್ಕು ವರ್ಷದ ಗಂಡು ಚಿರತೆ ಬಿದ್ದಿದೆ. ಕಳೆದ ಮೂರು ತಿಂಗಳಿನಿಂದ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡು, ಜಾನುವಾರುಗಳ ಮೇಲೆ ದಾಳಿ ಮತ್ತು ಜನರಿಗೆ ಆತಂಕ ಉಂಟು ಮಾಡಿತ್ತು. ಚಿರತೆ ಸೆರೆಗೆ ಬೋನು ಇಡುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು. ಈಗ ಚಿರತೆ ಸೆರೆಯಾಗಿದ್ದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
