ಉದಯವಾಹಿನಿ, ನವದೆಹಲಿ : ವಿರೋಧ ಪಕ್ಷ ಇಂಡಿಯಾ ಮೈತ್ರಿಕೂಟದ ಸದಸ್ಯರ ತೀವ್ರ ಗದ್ದಲ ಗಲಾಟೆ ನಡುವೆ ಸಂಸತ್ತಿನ ಉಭಯ ಸದನಗಳಲ್ಲಿ ಮಂಡಿಸಲಾಗಿದ್ದ ವಕ್ಫ್ ತಿದ್ದುಪಡಿ ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿ -ತಿದ್ದುಪಡಿ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.ಮಾರ್ಚ್ ೧೦ ರಂದು ಪ್ರಾರಂಭವಾಗಲಿರುವ ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ವಕ್ಫ್ ಆಸ್ತಿಗಳ ನೋಂದಣಿ ಸುಗಮಗೊಳಿಸುವ ಗುರಿ ಹೊಂದಿರುವ ಹಿನ್ನೆಲೆಯಲ್ಲಿ ಮಸೂದೆಯನ್ನು ಮಂಡಿಸಲು ದಾರಿ ಮಾಡಿಕೊಟ್ಟಿದೆ ಎಂದು ಮೂಲಗಳು ತಿಳಿಸಿವೆ.ಬಿಜೆಪಿ ನಾಯಕ ಜಗದಾಂಬಿಕಾ ಪಾಲ್ ನೇತೃತ್ವದ ಜೆಪಿಸಿ, ವಿರೋಧ ಪಕ್ಷದ ಭಿನ್ನಾಭಿಪ್ರಾಯದ ನಡುವೆಯೂ ಶಾಸನಕ್ಕೆ ಹಲವಾರು ತಿದ್ದುಪಡಿಗಳನ್ನು ಸೂಚಿಸಿತ್ತು. ಇದಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿರುವುದರಿಂದ ಹೊಸ ಕಾನೂನು ರೂಪಿಸಲು ಸಹಕಾರಿಯಾಗಿದೆ. ಫೆಬ್ರ್ರವರಿ ೧೩ ರಂದು ಮಂಡಿಸಲಾಗಿದ್ದ ತಿದ್ದುಪಡಿ ಮಸೂದೆಗಳನ್ನು ಫೆಬ್ರವರಿ ೧೯ ರಂದು ನಡೆದ ಕೇಂದ್ರ ಸಭೆಯಲ್ಲಿ ಸಂಪುಟದಲ್ಲಿ ಮಸೂದೆಗೆ ತಿದ್ದುಪಡಿಗಳನ್ನು ಅನುಮೋದಿಸಿದೆ.೨೦೨೫ ರ ಬಜೆಟ್ ಅಧಿವೇಶನದ ಮೊದಲಾರ್ಧದಲ್ಲಿ ಪ್ರತಿಪಕ್ಷಗಳ ಗದ್ದಲದ ನಡುವೆಯೂ ಸಂಸತ್ತಿನಲ್ಲಿ ವರದಿಯನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸಲಾಗಿತ್ತು ಎರಡೂ ಸದನಗಳಲ್ಲಿ ಕಲಾಪಗಳನ್ನು ಸ್ವಲ್ಪ ಸಮಯದವರೆಗೆ ಮುಂದೂಡಲು ಕಾರಣವಾಗಿತ್ತು. ವಿರೋಧ ಪಕ್ಷ ಸಂಸದರು ಜಂಟಿ ಸಂಸದೀಯ ಸಭೆಯಲ್ಲಿ ಮಂಡಿಸಲಾಗಿದ್ದು ಭಿನ್ನಾಭಿಪ್ರಾಯದ ಟಿಪ್ಪಣಿಗಳನ್ನು ಜೆಪಿಸಿ ವರದಿಯಿಂದ ಬದಲಾಯಿಸಲಾಗಿದೆ. ಅವುಗಳನ್ನು ವರದಿಯಲ್ಲಿ ಸೇರಿಸಬೇಕು ಎಂದು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪಟ್ಟು ಹಿಡಿದು ಪ್ರತಿಪಕ್ಷಗಳು ಪಟ್ಟು ಹಿಡಿದಿದ್ದವು.

ಜನವರಿಯಲ್ಲಿ, ಸಂಸದೀಯ ಸಮಿತಿಯು ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಸದಸ್ಯರು ಪ್ರಸ್ತಾಪಿಸಿದ ವಕ್ಫ್ ಮಸೂದೆಯ ಎಲ್ಲಾ ತಿದ್ದುಪಡಿಗಳನ್ನು ಅಂಗೀಕರಿಸಿತ್ತು ಮತ್ತು ವಿರೋಧ ಪಕ್ಷದ ಸದಸ್ಯರು ಸೂಚಿಸಿದ ಪ್ರತಿಯೊಂದು ಬದಲಾವಣೆ ಮಾಡುವಂತೆ ಪಟ್ಟು ಹಿಡಿದಿತ್ತು. ಇದು ಗದ್ದಲ ಗಲಾಟೆಗೆ ಅವಕಾಶ ಮಾಡಿಕೊಟ್ಟಿತ್ತು.

Leave a Reply

Your email address will not be published. Required fields are marked *

error: Content is protected !!